HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಐಡಿಯಾ ಜನರೇಶನ್” ಕಾರ್ಯಾಗಾರ

ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಜೆಕ್ಟ್ ಐಡಿಯಾ ಜನರೇಶನ್ ಬಗ್ಗೆ ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರ ನಡೆಯಿತು. ಎನ್.ಐ.ಟಿ.ಕೆ ಸುರತ್ಕಲ್ ಸ್ಟೆಪ್ (ಎಸ್‌ಟಿಇಪಿ) ವಿಭಾಗದಲ್ಲಿ ಸೇವೆಸಲ್ಲಿಸಿದ್ದ ರೇವಣ್‌ಕುಮಾರ್ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.
ವಿವಿಧ ಕ್ಷೇತ್ರಗಳಲ್ಲಿನ ಪ್ರಸ್ತುತ ಸಮಸ್ಯೆಗಳಿಗೆ ವೈಜ್ಞಾನಿಕ ಹಾಗು ತಾಂತ್ರಿಕ ನೆಲೆಯಲ್ಲಿ ಪರಿಹಾರ ಕೆಂಡುಕೊಳ್ಳುವ ನಿಟ್ಟಿನಲ್ಲಿ, ಅಗತ್ಯವಿರುವ ಪ್ರಾಜೆಕ್ಟ್‌ಗಳನ್ನು ಗುರುತಿಸಿ, ಅಭಿವೃದ್ಧಿ ಪಡಿಸಿ ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಲು ಬೇಕಾದ ವಿವಿಧ ಹಂತಗಳ ಬಗ್ಗೆ ಅವರು ತಮ್ಮ ಉಪನ್ಯಾಸದಲ್ಲಿ ವಿವರ ನೀಡಿದರು.
ಪ್ರಾಂಶುಪಾಲ ಡಾ| ಅಶೋಕ್ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ| ಗಿರೀಶ್ ಕುಮಾರ್ ಹಾಗೂ ಪ್ರೊ. ಮನೋಜ್ ಗಡಿಯಾರ್ ಕಾರ್ಯಕ್ರಮ ಸಂಯೋಜಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.