ಉಜಿರೆ: ಇಲ್ಲಿಯ ಶ್ರೀ ಜನಾರ್ದನ ದೇವಸ್ಥಾನದ ಆಶ್ರಯದಲ್ಲಿ ತುಳು ಶಿವಳ್ಳಿ ಸಭಾ ಬೆಳ್ತಂಗಡಿ ಹಾಗೂ ಉಜಿರೆಯ ಯಕ್ಷಾಭಿಮಾನಿಗಳ ಸಹಯೋಗದೊಂದಿಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನ ವಠಾರದಲ್ಲಿ ಮಾ.15 ರಿಂದ 17 ರವರೆಗೆ ನಡೆಯಲಿರುವ ಮೂರು ದಿನಗಳ ಅಮೋಘ ಯಕ್ಷ ಸಂಭ್ರಮದ ಉದ್ಘಾಟನಾ ಸಮಾರಂಭವು ಮಾ.15 ರಂದು ಜರುಗಿತು
ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಗೌರವಾಧ್ಯಕ್ಷ ವಿಜಯರಾಘವ ಪಡ್ವೆಟ್ನಾಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ನ್ಯಾಯವಾದಿ ಬಿ.ಕೆ ಧನಂಜಯ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ನ.ಪಂ. ಮುಖ್ಯಾಧಿಕಾರಿ ಬಿ.ಸುಧಾಕರ್, ಯಕ್ಷಭಾರತಿ ಕನ್ಯಾಡಿ ಅಧ್ಯಕ್ಷ ದಯಾನಂದ ಎಳಚಿತ್ತಾಯ, ಉಜಿರೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಅರವಿಂದ ಕಾರಂತ , ತಾಲೂಕು ತುಳು ಶಿವಳ್ಳಿ ಸಭಾಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ, ತುಳು ಶಿವಳ್ಳಿ ಉಜಿರೆ ವಲಯಾಧ್ಯಕ್ಷ ಶರತ್ಕೃಷ್ಣ ಪಡ್ವೆಟ್ನಾಯ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.