ಮಾ.25: ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ

ಬೆಳಾಲು: ಇಲ್ಲಿಯ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ವಾರ್ಷಿಕ ಉತ್ಸವ ಮಾ.25 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬೆಳಿಗ್ಗೆ ನಾಗತಂಬಿಲ, ಮಹಾಪೂಜೆ, ದುರ್ಗಾ ಪೂಜೆ, ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 6.00 ರಿಂದ ಮಂಗಳೂರಿನ ಲಲಿತ ಕಲಾಸಂಗಮ ಇವರ ಭಜನೆ ಹಾಡುಗಾರಿಕೆಯೊಂದಿಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಮ್ಮಟ, ರಾತ್ರಿ ಗಂಟೆ 8 ಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರುಗಳಾದ ಉಜಿರೆಯ ಬೆನಕ ಹೆಲ್ತ್ ಸೆಂಟರ್‌ನ ಡಾ| ಗೋಪಾಲಕೃಷ್ಣ, ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ, ಸುದ್ದಿ ಬಿಡುಗಡೆ ವಾರ ಪತ್ರಿಕೆಯ ಸಹಾಯಕ ವ್ಯವಸ್ಥಾಪಕ ಜಾರಪ್ಪ ಪೂಜಾರಿ ಬೆಳಾಲು, ಬೆಳಾಲು ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಗೌಡ, ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಜಿ.ಸೋಮೇ ಗೌಡ, ಉಜಿರೆ ನ್ಯಾಚುರೋಪತಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಧರ್ಮೇಂದ್ರ ಕುಮಾರ್, ಬಂದಾರಿನ ಪ್ರಗತಿಪರ ಕೃಷಿಕ ಮೋನಪ್ಪ ಸಿರಿಯಾನ್, ನೋಟರಿ ವಕೀಲ ಶ್ರೀನಿವಾಸ ಗೌಡ ಬೆಳಾಲು, ರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟುಗಳಾದ ಬಂದಾರು ಹಿ.ಪ್ರಾ ಶಾಲಾ ವಿದ್ಯಾರ್ಥಿಗಳನ್ನು ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ರಾತ್ರಿ ೯.೦೦ ಕ್ಕೆ ಶ್ರೀ ಚಾಮುಂಡೇಶ್ವರಿ ದೇವಿಯ ವಾರ್ಷಿಕ ಉತ್ಸವ ನಡೆಯಲಿದೆ ಎಂದು ಕ್ಷೇತ್ರದ ಡೊಂಬಯ್ಯ ಗೌಡ ಮತ್ತು ವ್ಯವಸ್ಥಾಪಕ ಹರೀಶ್ ಆರಿಕೋಡಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.