ಲೋಕಸಭಾ ಚುನಾವಣೆ:  ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: 17ನೇ ಲೋಕಸಭಾ ಚುನಾವಣೆಯು ಏ.18 ರಂದು ನಡೆಯಲಿದ್ದು, ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ 3ನೇ ಬಾರಿಗೆ ಹಾಲಿ ಸಂಸದ ನಳಿನ್‌ಕುಮಾರ್ ಕಟೀಲ್ ಇಂದು (ಮಾ.25) ಮಂಗಳೂರು ದ.ಕ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ಡಿ.ಸಿ. ಸಸಿಕಾಂತ್ ಸೆಂಥಿಲ್‌ರವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ದ.ಕ.ಜಿಲ್ಲಾಧ್ಯಕ್ಷ ಹಾಗೂ ಪುತ್ತೂರು ಶಾಸಕರೂ ಆಗಿರುವ ಸಂಜೀವ ಮಠಂದೂರು,ಕಾರ್ಕಳ ಶಾಸಕ ಸುನಿಲ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಪ್ರಮುಖರಾದ  ಪುರುಷೋತ್ತಮ ಭಟ್ ಮೊದಲಾದರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.