ಕಾಂಗ್ರೆಸ್ ಬಹಿರಂಗ ಚುನಾವಣಾ ಪ್ರಚಾರ ಸಭೆ

ಬೆಳ್ತಂಗಡಿ: ಲೋಕಸಭಾ ಚುನಾವಣೆ ಪ್ರಯುಕ್ತ ಮೈತ್ರಿಕೂಟದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಪರ ಉಭಯ ಜಿಲ್ಲೆಯ ಕಾಂಗ್ರೆಸ್ ಬಹಿರಂಗ ಚುನಾವಣಾ ಪ್ರಚಾರ ಸಭೆಯು ಎ.1 ರಂದು ಬೆಳ್ತಂಗಡಿ ಅಂಬೇಡ್ಕರ ಭವನದ ಬಳಿಯ ಮೈದಾನದಲ್ಲಿ ಜರುಗಿತು.
ರಾಜ್ಯದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಈ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್, ಮಾಜಿ ಸಚಿವರಾದ ಬಿ ರಮಾನಾಥ ರೈ, ಮಾಜಿ ಶಾಸಕ ವಸಂತ ಬಂಗೇರ ,ಕೆ ಗಂಗಾಧರ ಗೌಡ, ರಾಜೇಂದ್ರ ಕುಮಾರ್, ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ, ಕೆ.ಹರೀಶ್ ಕುಮಾರ್ ಚುನಾವಣಾ ಪ್ರಚಾರ ಭಾಷಣ ಮಾಡಿದರು. ಮೈತ್ರಿ ಅಭ್ಯರ್ಥಿ, ಪಕ್ಷದ ಭರವಸೆಯ ಯುವ ನಾಯಕ ಮಿಥುನ್ ರೈ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಲೂಕಿನ ಮತದಾರ ಬಾಂಧವರಲ್ಲಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಾಜಶೇಖರ ಅಜ್ರಿ ಮತ್ತು ಶ್ರೀನಿವಾಸ ವಿ ಕಿಣಿ, ಜಿ.ಪಂ ಸದಸ್ಯರಾದ ಪಿ ಧರಣೇಂದ್ರ ಕುಮಾರ್ ಮತ್ತು ನಮಿತಾ, ಶಾಹುಲ್ ಹಮೀದ್, ತಾ.ಪಂ ಸದಸ್ಯ ಪ್ರವೀಣ್ ಗೌಡ, ಕೆಪಿಸಿಸಿ ಸದಸ್ಯ ಪೀತಾಂಬರ ಹೇರಾಜೆ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿನ್, ಪ್ರಮೋದ್ ರೆಖ್ಯ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಶ್ರಫ್ ನೆರಿಯ, ಮುಖಂಡರಾದ ಅಭಿನಂದನ್, ಉಷಾ ಶರತ್, ಪಳನಿಸ್ವಾಮಿ, ಗಿರೀಶ್ ಕೋಟ್ಯಾನ್, ರಾಜಶೇಖರ ಶೆಟ್ಟಿ, ಅಬ್ದುಲ್ ರಹಿಮಾನ್ ಪಡ್ಪು, ಪಿ ಕೇಶವ ಗೌಡ ಮತ್ತು ಬಿ ಅಶ್ರಫ್ ನೆರಿಯ, ತಾ| ಮಹಿಳಾ ಜೆಡಿಎಸ್ ಅಧ್ಯಕ್ಷೆ ಸಿಂಧೂದೇವಿ, ರಂಜನ್ ಗೌಡ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.