ಪುಂಜಾಲಕಟ್ಟೆ ರಾಷ್ಟ್ರೀಯ ಸೇವಾ ಯೋಜನೆ ಘಟಕ: ಸಮಾರೋಪ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಪುಂಜಾಲಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕ-1 ಮತ್ತು2 ರ 2018-19 ಶೈಕ್ಷಣಿಕ ಸಾಲಿನ ಕಾರ್ಯ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ಎ.10 ರಂದು ಕಾಲೇಜಿನಲ್ಲಿ ಜರುಗಿತು. ಸಮಾರೋಪ ಭಾಷಣಕಾರರಾಗಿ ಆಗಮಿಸಿದ ಸ.ಪ್ರ.ದ ಕಾಲೇಜು ಸಿದ್ಧಕಟ್ಟೆಇಲ್ಲಿನ ಯೋಜನಾಧಿಕಾರಿ ಪ್ರೊ.ದೇವಿಪ್ರಸಾದ್‌ ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಕಳಕಳಿ, ಪರಸ್ಪರ ಸಂಬಂಧ ಮತ್ತು ಆತ್ಮವಿಶ್ವಾಸವನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ ಗಣಪತಿ ಭಟ್‌  ಅಧ್ಯಕ್ಷತೆ ವಹಿಸಿದ್ದರು. ಯೋಜನಾಧಿಕಾರಿಗಳು, ಉಪನ್ಯಾಸ ವರ್ಗದವರು ಮತ್ತುಸ್ವಯಂಸೇವಕರು ಉಪಸ್ಥಿತರಿದ್ದರು. ಸಾತ್ವಿಕ್ ಸ್ವಾಗತಿಸಿ, ರಮೇಶ್ ವಂದಿಸಿ, ನವ್ಯ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.