HomePage_Banner_
HomePage_Banner_
HomePage_Banner_

ಶ್ರೀ ಗುರುದೇವ ಕಾಲೇಜಿನಲ್ಲಿ ಏಡ್ಸ್ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಇಲ್ಲಿನ ಶ್ರೀ ಗುರುದೇವ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ರೆಡ್ ರಿಬ್ಬನ್ ಕ್ಲಬ್, ಜಿಲ್ಲಾ ಏಡ್ಸ್ ನಿಯಂತ್ರಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಹಭಾಗಿತ್ವದಲ್ಲಿ ಹೆಚ್‌ಐವಿ-ಏಡ್ಸ್ ಮಾಹಿತಿ ಕಾರ್ಯಾಗಾರವು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿ ಬೆಳ್ತಂಗಡಿ ಸಾರ್ವಜನಿಕ ಸಮುದಾಯ ಆಸ್ಪತ್ರೆಯ ಆಪ್ತ ಸಮಾಲೋಚಕ ಧರ್ಮಪಾಲ್ ಎಂ ಮಾತನಾಡಿ ಏಡ್ಸ್ ಹರಡುವ ವಿಧಾನ ಹಾಗೂ ನಿಯಂತ್ರಿಸುವ ಕಾರ್ಯ ಯೋಜನೆಯ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ, ಪತ್ರಕರ್ತ ಶ್ರವಣ್ ಕುಮಾರ್ ನಾಳ ವೇದಿಕೆಯಲ್ಲಿದ್ದರು. ಕಾಲೇಜಿನ ಎನ್‌ಎಸ್‌ಎಸ್ ಯೋಜನಾಧಿಕಾರಿ ಬಿ.ಎ.ಶಮೀವುಲ್ಲಾ ಪ್ರಸ್ತಾವಿಕವಾಗಿ ಮಾತನಾಡಿ ಶುಭ ಹಾರೈಸಿದರು.
ಘಟಕದ ಸ್ವಯಂಸೇವಕಿ ಜಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿ, ಘಟಕದ ನಾಯಕಿ ಯೋಗೀಶ್ವರಿ ಧನ್ಯವಾದವಿತ್ತರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.