HomePage_Banner_
HomePage_Banner_
HomePage_Banner_

ಏ.15ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Advt_NewsUnder_1

ಏ.16ರಂದು ಎಲ್ಲಾ ಕಾಲೇಜುಗಳಲ್ಲಿ ಲಭ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕೃತ ಘೋಷಣೆ

ಬೆಳ್ತಂಗಡಿ : 2018-19ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏ.15ರಂದು ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ. ಶಿಖಾ ಅವರು, ಏ.16ರ ಬೆಳಗ್ಗೆಯಿಂದ ಎಲ್ಲ ಕಾಲೇಜುಗಳಲ್ಲೂ ಫಲಿತಾಂಶ ಲಭ್ಯವಾಗಲಿದೆ ಎಂದು  ತಿಳಿಸಿದ್ದಾರೆ. 

ಎ .೧೫ ರಂದು  ಬೆಳಿಗ್ಗೆ 11 ಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಫಲಿತಾಂಶ ಪ್ರಕಟಿಸುವುದರ ಜೊತೆಗೆ ಮಧ್ಯಾಹ್ನ 12 ಗಂಟೆಗೆ ವೆಬ್‌ಸೈಟ್‌ಗೆ (www.pue.kar.nic.in ) ಫಲಿತಾಂಶ ಅಪ್‌ಲೋಡ್‌ ಮಾಡಲಾಗುವುದು . ಮಂಗಳವಾರ (ಏ.16) ರಾಜ್ಯದ ಎಲ್ಲ ಪದವಿಪೂರ್ವ ಕಾಲೇಜುಗಳ ನೋಟಿಸ್‌ ಬೋರ್ಡ್‌ಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು. results.nic.in, examresults.net ವೆಬ್‌ಸೈಟ್‌ಗಳಲ್ಲಿಯೂ ಫಲಿತಾಂಶವನ್ನು ನೋಡಬಹುದು ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಇದೇ ಮೊದಲ ಬಾರಿಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತಿದೆ. ಮಾರ್ಚ್‌ 1 ರಿಂದ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಿತು. ಮಾರ್ಚ್‌ 23 ರಿಂದ ಮೌಲ್ಯಮಾಪನ ಆರಂಭವಾಗಿ ಕಳೆದ ವಾರಾಂತ್ಯದಲ್ಲಿ ಮುಗಿದಿತ್ತು. ಈ ಬಾರಿ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ನಂತರ ಅಂಕಗಳನ್ನು ಆನ್‌ಲೈನ್ ಮೂಲಕ ಸರ್ವರ್‌ಗೆ ಅಪ್‌ಲೋಡ್ ಮಾಡಿದ್ದರಿಂದ ಬೇಗನೆ ಫಲಿತಾಂಶ ನೀಡಲು ಸಾಧ್ಯವಾಗಿದೆ. ಸಾಮಾನ್ಯವಾಗಿ ಸಿಇಟಿ ಪರೀಕ್ಷೆಯ ಬಳಿಕ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತಿತ್ತು.

ಸಿಇಟಿ ಏ. 29 ರಿಂದ ಮೇ. 1 ರ ವರೆಗೆ ನಡೆಯಲಿದೆ. ಪಿಯುಸಿಯಲ್ಲಿ ವಿಜ್ಞಾನ ವಿಷಯ ವ್ಯಾಸಂಗ ಮಾಡಿರುವ ಬಹುತೇಕ ವಿದ್ಯಾರ್ಥಿಗಳು ಸಿಇಟಿ ಬರೆಯುವುದರಿಂದ ವಿದ್ಯಾರ್ಥಿಗಳ ಒತ್ತಡ ಕಡಿಮೆ ಮಾಡಿ ನಿರಾಳವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಪಿಯು ಫಲಿತಾಂಶವನ್ನು ಶೀಘ್ರ ಪ್ರಕಟಿಸಲು ತೀರ್ಮಾನಿಸಲಾಗಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.