ನಾರಾವಿ: ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಯವರು ನಾರಾವಿಯ ಸೂರ್ಯನಾರಾಯಣ ದೇವಸ್ಥಾನ, ನಾರಾವಿ ಚರ್ಚ್, ಕಾಶಿಪಟ್ಣ ಜುಮ್ಮಾ ಮಸೀದಿಗೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೊಜ, ಮಾಜಿ ಶಾಸಕ ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಕಿಣಿ, ಜಿ.ಪ ಸದಸ್ಯ ಧರಣೇಂದ್ರ ಕುಮಾರ್, ಕೆಪಿಸಿಸಿ ಸದಸ್ಯ ಪಿತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್, ತಾ.ಪಂ.ಸದಸ್ಯೆ ರೂಪ, ಸತೀಶ್ ಕೆ ಕಾಶಿಪಟ್ಣ, ನಾರಾವಿ ಗ್ರಾ.ಪಂ.ಅಧ್ಯಕ್ಷ ರವೀಂದ್ರ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.