ಅಳದಂಗಡಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಿಥುನ್ ರೈ ಪರವಾಗಿ ಮತ ಯಾಚನೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಎ.15 ರಂದು ಅಳದಂಗಡಿಯಲ್ಲಿ ನಡೆಯಿತು.
ಸಭೆಯಲ್ಲಿ ಮುಖ್ಯಮಂತ್ರಿಗಳ ಸಂಸದೀಯ ಪ್ರ.ಕಾರ್ಯದರ್ಶಿ ಐವನ್ ಡಿಸೋಜ, ಮಾಜಿ ಶಾಸಕ ಕೆ.ವಸಂತ ಬಂಗೇರ, ಮಾಜಿ ಸಚಿವ ಗಂಗಾಧರ ಗೌಡ, ಜೆ.ಡಿ.ಎಸ್ ತಾಲೂಕು ಅಧ್ಯಕ್ಷ ಪ್ರವೀಣ್ಚಂದ್ರ ಜೈನ್, ಜಿ.ಪಂ ಸದಸ್ಯ ಶೇಖರ್ ಕುಕ್ಕೇಡಿ, ತಾ.ಪಂ ಸದಸ್ಯರಾದ ವಿನುಷಾ ಪ್ರಕಾಶ್ ಅಳದಂಗಡಿ, ಜಯಶೀಲಾ ಕುಶಾಲಪ್ಪ ಗೌಡ ಶಿರ್ಲಾಲು, ಸುಶೀಲಾ ಪಡಂಗಡಿ, ತಾ.ಪಂ ಮಾಜಿ ಸದಸ್ಯ ಹೆಚ್.ಧರ್ಣಪ್ಪ ಪೂಜಾರಿ, ಅಳದಂಗಡಿ ಗ್ರಾ.ಪಂ ಅಧ್ಯಕ್ಷ ಸತೀಶ್ ಮಿತ್ತಮಾರು, ಬಳಂಜ ಗ್ರಾ.ಪಂ ಅಧ್ಯಕ್ಷೆ ದೇವಕಿ, ಪಡಂಗಡಿ ಗ್ರಾ.ಪಂ ಅಧ್ಯಕ್ಷೆ ಮೀನಾಕ್ಷಿ ಮೊದಲಾದವರು ಉಪಸ್ಥಿತರಿದ್ದರು.