ಬಳಂಜದಲ್ಲಿ ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಶಾಖೆ ಉದ್ಘಾಟನೆ

ಬಳಂಜ : ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿ. ಕಾರ್ಕಳ ಇದರ ನೂತನ ಬಳಂಜ ಶಾಖೆಯ ಉದ್ಘಾಟನಾ ಸಮಾರಂಭವು ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಎ.21ರಂದು ಜರುಗಿತು.

ನೂತನ ಶಾಖೆಯ ಉದ್ಘಾಟನೆಯನ್ನು ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯ ಇದರ ಅನುವಂಶಿಯ ಆಡಳಿತ ಮೊಕ್ತೇಸರ ಎಸ್.ಸುಭಾಶ್ಚಂದ್ರ ಸುರ್ಯಗುತ್ತು ನೆರವೇರಿಸಿ, ಸಂಸ್ಥೆಗೆ ಶುಭ ಹಾರೈಸಿದರು. ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ನೇಮಿರಾಜ ಆರಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ಸುನೀಲ್ ಕುಮಾರ್ ಬಜಗೋಳಿ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶಿಯ ಆಡಳಿತ ಮೊಕ್ತೇಸರ ಬಿ. ಶೀತಲ್ ಕುಮಾರ್, ಬಳಂಜ ಗ್ರಾ.ಪಂ ಅಧ್ಯಕ್ಷೆ ದೇವಕಿ, ತಾ.ಪಂ ಮಾಜಿ ಸದಸ್ಯ ಧರ್ಣಪ್ಪ ಪೂಜಾರಿ, ಬಳಂಜ ಮಾರುತಿ ಕಾಂಪ್ಲೆಕ್ಸ್‌ನ ಮಾಲಕ ಗುರುಪ್ರಸಾದ್ ಭಾಗವಹಿಸಿದ್ದರು.ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶು ಕುಮಾರ್ ಜೈನ್, ಬೆಳ್ತಂಗಡಿ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಶಶಿಕಿರಣ್ ಜೈನ್, ಆಡಳಿತ ಮಂಡಳಿಯ ನಿರ್ದೇಶಕರು, ಸಿಬಂದಿವರ್ಗದವರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.