ಮನೆಗೆ ನುಗ್ಗಿ ಚಿನ್ನಾಭರಣ-ನಗದು ಕಳವು: ಆರೋಪಿ ಬಂಧನ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿನ ಪುಂಜಾಲಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ ಗಂಪದಡ್ಡದಲ್ಲಿ ಎ.19 ರಂದು ಯೂಸೂಬ್ ಬ್ಯಾರಿಯರವರ ಮನೆಯ ಹಿಂಬಾಗಿಲನ್ನು ಒಡೆದು ಮನೆಯೊಳಗೆ ಪ್ರವೇಶಿಸಿ, ಮನೆಯಲ್ಲಿದ್ದ ಕಬ್ಬಿಣದ ಬೀರುವನ್ನು ಮೀಟಿ ಬೀರುವಿನಲ್ಲಿದ್ದ 62ಗ್ರಾಂ. ಚಿನ್ನದ ಒಡವೆಗಳು ಹಾಗೂ ನಗದನ್ನು ಕಳ್ಳತನ ಮಾಡಿದ್ದಾರೆ.

ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮೀಪ್ರಸಾದ್, ದ.ಕ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಕ್ರಮ್ ಅಮಟೆ, ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸೈದುಲ್ ಅದಾವತ ರವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಮತ್ತು ಪುಂಜಾಲಕಟ್ಟೆ ಠಾಣಾ ಸಬ್ ಇನ್ಸ್‌ಪೆಕ್ಟರ್ ಕೆ. ಆರ್. ಸುನೀತಾ ತಂಡದೊಂದಿಗೆ ಕಾರ್ಯಾಚರಣೆ ನಡೆಸಿ ಸಾದಿಕ್ ಎಂಬಾತನನ್ನು ಬಂಧಿಸಿದ್ದಾರೆ.
ಈತನು ಇಸ್ಪೀಟ್ ಚಟಕ್ಕೆ ಬಲಿಯಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಕಳ್ಳತನವಾಗಿದ್ದ 62ಗ್ರಾಂ. ಚಿನ್ನದ ಒಡವೆಯನ್ನು ಪುಂಜಾಲಕಟ್ಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.