ಸುರೇಶ್ ಮೆರಿಣಾಪುರ ಅವರಿಗೆ ಪಿ.ಎಚ್.ಡಿಪದವಿ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಸುರೇಶ್ ಮೆರಿಣಾಪುರ ಅವರು ಮಂಗಳೂರು ವಿಶ್ವವಿದ್ಯಾಲಯದಿಂದ ಪ್ರಾದೇಶಿಕ ಕಾದಂಬರಿಗಳಲ್ಲಿ ತುಳು ನಾಡಿನ ಸಂಸ್ಕೃತಿಯ ಸ್ವರೂಪ ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಇವರು ಎಸ್.ವಿ.ಪಿ ಕನ್ನಡ ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ| ಅಭಯ್ ಕುಮಾರ್.ಕೆ ಇವರ ಮಾರ್ಗದರ್ಶನಲ್ಲಿ ಈ ಪ್ರಬಂಧವನ್ನು ಮಂಡಿಸಿದ್ದಾರೆ.
ಮಸುಮ ಕಾವ್ಯನಾಮದಿಂದ ಪ್ರಖ್ಯಾತರಾದ ಇವರು ಏಳು ಕವನ ಸಂಕಲನ, ಕಥಾ ಸಂಕಲನ, ಕಾದಂಬರಿ, ನಾಟಕ ಹಾಗೂ ವಿಮರ್ಶಾ ಕೃತಿಗಳನ್ನು ಬರೆದಿದ್ದು, 2018 ರ ಸಾಲಿನ ಶಿವರಾಮ ಕಾರಂತ ಪುರಸ್ಕಾರವನ್ನು ಬೂಬನ ಕಥೆಗಳು ಕಥಾ ಸಂಕಲನಕ್ಕೆ ಪಡೆದಿದ್ದಾರೆ. ಅಲ್ಲದೇ ಇವರ ನೂರಕ್ಕೂ ಅಧಿಕ ಲೇಖನಗಳು ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.