ವೇಣೂರು ಎಸ್‌ಡಿಎಂ ಕೈಗಾರಿಕಾ ತರಬೇತಿ ಕೇಂದ್ರ (ಐಟಿಐ)ಗೆ ದಾಖಲೆ ಫಲಿತಾಂಶ

ಫೆಬ್ರವರಿಯಲ್ಲಿ ನಡೆದಿದ್ದ ಅಖಿಲ ಭಾರತ ವೃತ್ತಿ ಪರೀಕ್ಷೆಯ ಮೂರನೇ ಸೆಮಿಸ್ಟರ್ ಫಲಿತಾಂಶ ಪ್ರಕಟಗೊಂಡಿದ್ದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಗೆ ಐದು ವಿಭಾಗಗಲ್ಲೂ ಶೇ. 100 ಫಲಿತಾಂಶ ಬಂದಿದೆ.
ಇಲೆಕ್ಟ್ರಿಷಿಯನ್, ಮೆಕ್ಯಾನಿಕ್ ಮೋಟಾರು ವಾಹನ, ಮೆಕ್ಯಾನಿಕ್ ಆರ್ ಆಂಡ್ ಎ.ಸಿ ಫಿಟ್ಟರ್, ಟರ್ನರ್ ವಿಭಾಗಗಳಲ್ಲಿ ಶೇ.100 ಫಲಿತಾಂಶ ಬಂದಿದೆ. ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ವಿಭಾಗದಲ್ಲಿ ಶೇ. 95.45 ಫಲಿತಾಂಶ ಬಂದಿದ್ದು, ಪರೀಕ್ಷೆಗೆ ಹಾಜರಾದ 117 ವಿದ್ಯಾರ್ಥಿಗಳಲ್ಲಿ 116 ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳೊಂದಿಗೆ ತೇರ್ಗಡೆ ಹೊಂದಿ ಒಟ್ಟು 99.14 ಫಲಿತಾಂಶ ದಾಖಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲ ವಿಶ್ವೇಶ್ವರ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಹಲವಾರು ಬಹುರಾಷ್ಟ್ರೀಯ ಕಂಪೆನಿಗಳು ಕ್ಯಾಂಪಸ್ ಸಂದರ್ಶನ ನಡೆಸಿ ವಿದ್ಯಾರ್ಥಿಗಳ ಉದ್ಯೋಗ ನೇಮಕಾತಿ ಕೈಗೊಂಡಿದೆ.
ಇನ್ನಷ್ಟು ಕಂಪೆನಿಗಳು ಮುಂದಿನ ದಿನಗಳಲ್ಲಿ ಕ್ಯಾಂಪಸ್ ಸಂದರ್ಶನ ನಡೆಸಲಿದೆ. ಅತ್ಯುತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಮತ್ತು ಅದಕ್ಕೆ ಕಾರಣರಾದ ಬೋಧಕ ವೃಂದದವರನ್ನು ಸಂಸ್ಥೆಯ ಅಧ್ಯಕ್ಷ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.