ಶಿರಾಡಿ ಕೊಡ್ಯಕಲ್ಲು ತಿರುವು ಬಳಿ ಕಾರು ಕಮರಿಗೆ: ಓರ್ವ ಮೃತ್ಯು, ನಾಲ್ವರಿಗೆ ಗಾಯ

ಶಿರಾಡಿ : ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಶಿರಾಡಿ ಗ್ರಾಮದ ಕೊಡ್ಯಕಲ್ಲು ತಿರುವು ಬಳಿ ಕಾರೊಂದು ಸುಮಾರು 20 ಅಡಿ ಆಳದ ಹೊಂಡಕ್ಕೆ ಉರುಳಿ ಬಿದ್ದು, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟು, ಕಾರಿನಲ್ಲಿದ್ದ 4 ಮಂದಿ ಗಂಭೀರ ಸ್ವರೂಪದ ಗಾಯಗಳೊಂದಿಗೆ ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ.
ಮೃತಪಟ್ಟಿರುವ ಕಾರು ಚಾಲಕ ಕೋಲಾರದ ಮಾಲೂರು ನಿವಾಸಿ ಸುನಿಲ್ (30 ವ.) ಎಂಬವರಾಗಿರುತ್ತಾರೆ. ಉಳಿದಂತೆ ಕಾರಿನಲ್ಲಿದ್ದ ಬೆಂಗಳೂರು ನೆಲಮಂಗಲ ಪರಿಸರದ ನಿವಾಸಿಗಳಾದ ಪ್ರಶಾಂತ್ (25), ನವೀನ್ (30), ರಮೇಶ್ (25), ಮನೋಜ್ (26) ಎಂಬವರು ಗಂಭೀರ ಸ್ವರೂಪದ ಗಾಯಗೊಂಡಿದ್ದು, ಇವರುಗಳನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಈ 5 ಮಂದಿ ಧರ್ಮಸ್ಥಳ ಯಾತ್ರೆ ಮುಗಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ನೆಲ್ಯಾಡಿ ಹೊರ ಠಾಣಾ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.