HomePage_Banner_
HomePage_Banner_

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಚಾರಿ ಆಸ್ಪತ್ರೆಯ ಉಚಿತ ಚಿಕಿತ್ಸಾ ಶಿಬಿರ

ಇಳಂತಿಲ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸಹಯೋಗದೊಂದಿಗೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಂಡೆತ್ತಡ್ಕ ಮತ್ತು ಊರಿನ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಚಾರಿ ಆಸ್ಪತ್ರೆಯ ಉಚಿತ ಚಿಕಿತ್ಸಾ ಶಿಬಿರ ಮೇ.8 ರಂದು ವಾಣಿಶ್ರೀ ಭಜನಾ ಮಂದಿರದಲ್ಲಿ ಜರುಗಿತು.
ಶಿಬಿರದ ಉದ್ಘಾಟನೆಯನ್ನು ತಾ.ಪಂ ಸದಸ್ಯ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವಲಯಾಧ್ಯಕ್ಷ ಕೃಷ್ಣಯ್ಯ ಆಚಾರ್ಯ ನೆರವೇರಿಸಿದರು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷ ಸುಂದರ ಗೌಡ, ವೈದ್ಯಾಧಿಕಾರಿ ನಾರಾಯಣ ಪ್ರಭು, ಕಣಿಯೂರು ವಲಯ ಮೇಲ್ವಿಚಾರಕ ಮಾಧವ ಎಂ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಇಳಂತಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವಿಜಯ ಕುಮಾರ್ ಕಲ್ಲಳಿಕೆ, ಇಳಂತಿಲ ಗ್ರಾ.ಪಂ ಅಧ್ಯಕ್ಷ ಇಸುಬು, ಗ್ರಾ.ಪಂ ಸದಸ್ಯ ತಿಮ್ಮಪ್ಪ ಗೌಡ, ಹರಿಶ್ಚಂದ್ರ ಆಚಾರ್ಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಯಶೋಧ ಪ್ರಾರ್ಥಿಸಿ, ಸವಿತಾ ಸ್ವಾಗತಿಸಿ, ಗ್ರಾಮಾಭಿವೃದ್ಧಿ ಯೋಜನೆಯ ಅಂಡೆತ್ತಡ್ಕ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ವಸಂತಿ ಕಾರ್ಯಕ್ರಮ ನಿರೂಪಿಸಿದರು. ಸುಮಾರು ೫೦ ಮಂದಿ ಶಿಬಿರಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.