ರುಡ್‌ಸೆಟ್: ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮ ಮತ್ತು ಕಂಪ್ಯೂಟರೈಸ್ಡ್ ಅಕೌಂಟಿಂಗ್ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭವು ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ವೀರುಶೆಟ್ಟಿಯವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸುತ್ತಾ ವ್ಯವಹಾರದಲ್ಲಿ ಹೊಸತನವಿರಲಿ ಮತ್ತು ಸಮಸ್ಯೆಗಳಿಗೆ ಎದೆಗುಂದದಿರಿ ಎಂದು ಹಿತವಚನ ನೀಡಿದರು.

ರುಡ್‌ಸೆಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಎಮ್. ಜನಾರ್ಧನ್‌  ಉಪಸ್ಥಿತರಿದ್ದರು. ನಿರ್ದೇಶಕ ವಿನಯ್‌ಕುಮಾರ್ ರವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಹಿರಿಯ ಉಪನ್ಯಾಸಕ  ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಅನಸೂಯ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.