ಕೊಕ್ಕಡ ಸೀಮೆ ಮಾಯಿಲಕೋಟೆ ದೈವ ಸನ್ನಿಧಿಯಲ್ಲಿ ದೈವದ ಗುಡಿಗಳ ಶಿಲಾನ್ಯಾಸ

Advt_NewsUnder_1
Advt_NewsUnder_1

ಕೊಕ್ಕಡ ಸೀಮೆ ಮಾಯಿಲಕೋಟೆ ದೈವ ಸನ್ನಿಧಿಯಲ್ಲಿ ನೂತನವಾಗಿ ನಿರ್ಮಿಸಲಿರುವ ದೈವದ ಗುಡಿಗಳ ಶಿಲಾನ್ಯಾಸ ಸಮಾರಂಭವು ಮೆ.16 ರಂದು ನಡೆಯಿತು. ಶ್ರೀ ಧಾಮ ಮಾಣಿಲದ ಶ್ರೀ  ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಮಾನ್ಯ ಶಾಸಕ ಹರೀಶ್ ಪೂಂಜ ಶಿಲಾನ್ಯಾಸ ನೆರವೇರಿಸಿದರು.
ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ರಾವ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಶ್ರೀ ಕ್ಷೇ. ಧ. ಗಾ. ಯೋಜನೆ, ಸಮುದಾಯ ಅಭಿವೃದ್ಧಿ ವಿಭಾಗ ಯೋಜನಾಧಿಕಾರಿ ಜಯರಾಮ ನೆಲ್ಲಿತ್ತಾಯ, ಕಾವು-ಕೌಕ್ರಾಡಿ ತ್ರಿಗುಣಾತ್ಮಿಕ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಕುಶಾಲಪ್ಪ ಗೌಡ, ಜಿಲ್ಲಾ ಪಂಚಾಯತ್ ಸದಸ್ಯ ಕೊರಗಪ್ಪ ನಾಯ್ಕ್, ಕೊಕ್ಕಡ ಕ್ಷೇತ್ರ ತಾಲೂಕು ಪಂಚಾಯತ್ ಸದಸ್ಯ ಲಕ್ಷ್ಮೀ ನಾರಾಯಣ, ಕೊಕ್ಕಡ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷ ತುಕ್ರಪ್ಪ ಶೆಟ್ಟಿ, ಉಪ್ಪಿನಂಗಡಿ ಕ್ಷೇತ್ರ ಜಿಲ್ಲಾ ಪಂಚಾಯತ್ ಸದಸ್ಯ ಸರ್ವೋತ್ತಮ ಗೌಡ, ರೆಖ್ಯಾ ಗುಡ್ರಾ ಮಲ್ಲೇಶ್ವರ ದೇವಸ್ಥಾನದ ಅಧ್ಯಕ್ಷ ಮಂಜುನಾಥ ಗೌಡ ಕೈಕುರೆ, ಪುತ್ತೂರು ಎ.ಪಿ.ಯಂ.ಸಿ ಸದಸ್ಯ ಬಾಲಕೃಷ್ಣ ಬಾಣಜಾಲು, ಹತ್ಯಡ್ಕ ಸೇವಾ ಸಹಕಾರಿ ಸಂಘ ಅಧ್ಯಕ್ಷ ಜಗನ್ನಾಥ ಗೌಡ, ದೇವಪಾಲ ಅಜ್ರಿ ಉಳಿಯಬೀಡು ಪಟ್ರಮೆ, ರವಿಪ್ರಸಾದ್ ಶೆಟ್ಟಿ ರಾಮನಗರ ಬಲ್ಯ, ಚಂದ್ರಶೇಖರ ಶೆಟ್ಟಿ ಸ್ವಾಮಿಕೃಪಾ ಪೆರಣ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.