ಧರ್ಮಸ್ಥಳ: ಡಾ| ಹೆಗ್ಗಡೆಯವರಿಂದ ಜಿಲ್ಲಾ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣ

Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜುಲೈ 1 ರಂದು ನಡೆಯಲಿರುವ ಜಿಲ್ಲಾ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ದ ಡಾ ಡಿ.ವೀರೇಂದ್ರ ಹೆಗ್ಗಡೆಯವರು ಮೇ.20 ರಂದು ಅನಾವರಣಗೊಳಿಸಿದರು.
ಸಂದರ್ಭದಲ್ಲಿ ಮಾತನಾಡಿದ ಡಾ.ಹೆಗ್ಗಡೆಯವರು ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಜ್ಞಾನವಂತರು, ಪ್ರಜ್ಞಾವಂತರಾಗಿದ್ದು, ಸರಿಯಾದ ಮಾಹಿತಿ ಪಡೆದು ಘಟನೆಯ ವರದಿ ಮಾಡುತ್ತಾರೆ. ಜಿಲ್ಲೆಯ ಎರಡು ತಲೆಮಾರುಗಳನ್ನು ಕಂಡಿದ್ದೇನೆ. ಹಿರಿಯ ಪತ್ರಕರ್ತರ ತತ್ವಾದರ್ಶ ಮೈಗೂಡಿಸಿಕೊಂಡು, ಜನರ ನಂಬಿಕೆ ಕಳೆದುಕೊಳ್ಳದೆ ಮಾಧ್ಯಮದ ಘನತೆ ಗೌರವ ಉಳಿಸಿ ಮುನ್ನಡೆಯಬೇಕೆಂದರು ಹಾಗೂ ಪತ್ರಕರ್ತರ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಸಮ್ಮೇಳನದ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎನ್.ಆರ್.ಪೂವಣಿ, ಸದಸ್ಯ ಧನಕೀರ್ತಿ ಅರಿಗ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.