ಮಲೆಕುಡಿಯ ಯುವವೇದಿಕೆಯ ವತಿಯಿಂದ ಪ್ರತಿಭಾ ಪುರಸ್ಕಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಮಲೆಕುಡಿಯ  ಯುವವೇದಿಕೆಯ ವತಿಯಿಂದ 4 ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮೇ.19 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವೇದಿಕೆಯ ಅಧ್ಯಕ್ಷ ವೆಂಕಟೇಶ್ ಬೆಂಗಳೂರು ವಹಿಸಿದ್ದರು. ವೇದಿಕೆಯಲ್ಲಿ ಗೌರವಾಧ್ಯಕ್ಷೆ ವಸಂತಿ ಬೈರಕಟ್ಟ, ದ.ಕ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀನಿವಾಸ್ ಉಜಿರೆ, ಮಲೆಕುಡಿಯ ಸಂಘದ ಮಾಜಿ ಅಧ್ಯಕ್ಷ ನಾರಾಯಣ್ ಧರ್ಮಸ್ಥಳ, ನಿವೃತ್ತ ಶಿಕ್ಷಕಿ ಸೀತಮ್ಮ ಉಜಿರೆ ಮತ್ತಿತರರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದ.ಕ, ಉಡುಪಿ, ಚಿಕ್ಕಮಗಳೂರು, ಕೊಡಗು, ಕಾಸರಗೋಡು ಜಿಲ್ಲೆಗಳ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಮಲೆಕುಡಿಯ ಸಮುದಾಯದ ಸುಮಾರು 30 ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಪ್ರೋತ್ಸಾಹಧನ ವಿತರಿಸಲಾಯಿತು.
ಪುರುಷೋತ್ತಮ ಗುಂಡ್ಯ ಸ್ವಾಗತಿಸಿ, ವರದಿ ಮಂಡಿಸಿದರು. ಉಮೇಶ್ ನಾರಾವಿ ಕಾರ್ಯಕ್ರಮ ನಿರೂಪಿಸಿ, ಗಣೇಶ್ ಎಂ.ಜಿ ಧನ್ಯವಾದವಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.