ಪುದುವೆಟ್ಟು : ಶ್ರೀ.ಧ.ಮಂ.ಅ.ಹಿ.ಪ್ರಾ.ಶಾಲೆ, ಪುದುವೆಟ್ಟು ಇಲ್ಲಿಯ 2019-20ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಮೇ.29 ರಂದು ಜರುಗಿತು. ಶಾಲೆಗೆ ನೂತನವಾಗಿ ದಾಖಲಾದ ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಭವ್ಯ ಮೆರವಣಿಗೆಯ ಮೂಲಕ ಶಾಲೆಗೆ ಬರಮಾಡಿಕೊಳ್ಳಲಾಯಿತು. ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಶಾಲೆಯಲ್ಲಿ ಅರ್ಚಕ ಗುರುಭಟ್ ನೇತೃತ್ವಲ್ಲಿ ಗಣಹೋಮ ನಡೆಯಿತು.
ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸೋಮಶೇಖರ್ , ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಶಿಕ್ಷಕ ತರಬೇತುದಾರ ಪ್ರದೀಪ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಡಿ. ವಸಂತ್ ಭಟ್, ಮಕ್ಕಳ ಪೋಷಕರು , ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ತದನಂತರ ಆಗಮಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ಹಂಚಲಾಯಿತು.