ಗೋಸಾಗಾಟ: ಪೊಲೀಸ್ ವೈಫಲ್ಯ ಖಂಡಿಸಿ ಚಾರ್ಮಾಡಿ ಚೆಕ್‌ಪೋಸ್ಟ್ ಬಳಿ ಹಿಂದೂ ಸಂಘಟನೆಯಿಂದ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1

ಚಾರ್ಮಾಡಿ: ಐಷರಾಮಿ ಕಾರೊಂದರಲ್ಲಿ ಚಾರ್ಮಾಡಿ ಘಾಟಿ ಮೂಲಕ ಉಜಿರೆ ಕಡೆಗೆ ಅಕ್ರಮವಾಗಿ 6 ಗೋವುಗಳನ್ನು ಸಾಗಾಟ ಮಾಡುತ್ತಿದ್ದಾಗ ಮುಂಡಾಜೆ ಸನ್ಯಾಸಿಕಟ್ಟೆ ಎಂಬಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಪರಿಣಾಮ, ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿದ್ದ 6 ದನಗಳು ಸಾವನ್ನಪ್ಪಿದ್ದು, ಈ ಅಮಾನುಷ ಕೃತ್ಯವನ್ನು ಖಂಡಿಸಿ ಚಾರ್ಮಾಡಿ ವಲಯದ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ಜೂ.7 ರಂದು ಸಂಜೆ ಪ್ರತಿಭಟನೆ ನಡೆಯಿತು.
ಕಾನೂನಿನ ಯಾವುದೇ ಭಯವಿಲ್ಲದೆ ಅಕ್ರಮವಾಗಿ ಹಸುಗಳನ್ನು ಸಾಗಾಟ ಮಾಡಲಾಗುತ್ತಿದೆ. ಹಿಂದೂ ಸಂಘಟನೆಯಿಂದ ಈ ಹಿಂದೆಯೇ ಇದರ ಕುರಿತು ಸಂಬಂಧಪಟ್ಟ ಇಲಾಖೆಗೆ ಮಾಹಿತಿಯನ್ನು ನೀಡಲಾಗಿತ್ತು. ಚಾರ್ಮಾಡಿ ಚೆಕ್‌ಪೋಸ್ಟ್ ಬಳಿ ಸರಿಯಾಗಿ ತಪಾಸಣೆ ನಡೆಸುತ್ತಿಲ್ಲ ಹಾಗೂ ಗೋಕಳ್ಳರ ವಿರುದ್ಧ ಸಣ್ಣಪುಟ್ಟ ಪ್ರಕರಣವನ್ನು ದಾಖಲಿಸಿ ಬಿಡಲಾಗುತ್ತಿತ್ತು. ಇದರಿಂದ ಅವರು ಇನ್ನಷ್ಟು ಸಾಗಾಟವನ್ನು ಹೆಚ್ಚಿಸುತ್ತಿದ್ದಾರೆ. ಇದರಿಂದ ಸಮಾಜದಲ್ಲಿ ಅಶಾಂತಿಗೂ ಕಾರಣವಾಗುತ್ತಿದ್ದು, ಇಲಾಖೆಯು ಅಕ್ರಮ ದನ ಸಾಗಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರ ಮೂಲಕ ಮನವಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.