ಉಜಿರೆಯಲ್ಲಿ ಸ್ವಚ್ಛ ಮೇವ ಜಯತೇ ಆಂದೋಲನಕ್ಕೆ ಚಾಲನೆ

ಉಜಿರೆ: ದ.ಕ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ ಹಾಗೂ ಗ್ರಾ.ಪಂ ಉಜಿರೆ ಇದರ ಸಹಯೋಗದೊಂದಿಗೆ ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯಡಿ ವಿಸ್ವ ಪರಿಸರ ದಿನಾಚರಣೆಯನ್ನು ಆಚರಿಸುವ ಮೂಲಕಸ್ವಚ್ಛ ಮೇವ ಜಯತೇ ಆಂದೋಲನ“ಕ್ಕೆ ಇಂದು (ಜೂ.11) ಉಜಿರೆಯಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ ನೆರವೇರಿಸಿದರು. ತಾಲೂಕು ಸ್ವಚ್ಛತಾ ರಥಕ್ಕೆ ಉಜಿರೆ ಕ್ಷೇತ್ರದ ಜಿ.ಪಂ ಸದಸ್ಯೆ ನಮಿತಾ ಕೆ ಚಾಲನೆ ನೀಡಿದರು.
ನಂತರ ಉಜಿರೆ ಶಾರದಾ ಮಂಟಪದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ತಾ.ಪಂ ಉಪಾಧ್ಯಕ್ಷೆ ಶ್ರೀಮತಿ ವೇದಾವತಿ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿಯನ್, ಧರ್ಮಸ್ಥಳ ಕ್ಷೇತ್ರದ ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ, ಲಾಯಿಲ ಕ್ಷೇತ್ರದ ಜಿ.ಪಂ ಸದಸ್ಯೆ ಸೌಮ್ಯಲತಾ ಜೆ ಗೌಡ, ಉಜಿರೆ ಕ್ಷೇತ್ರದ ತಾ.ಪಂ ಸದಸ್ಯ ಶಶಿಧರ ಎಂ., ತಹಶಿಲ್ದಾರ್ ಗಣಪತಿ ಶಾಸ್ತ್ರಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕೆ.ಇ ಜಯರಾಂ, ಉಜಿರೆ ಗ್ರಾ.ಪಂ ಅಧ್ಯಕ್ಷ ಶ್ರೀಧರ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಗ್ರಾ.ಪಂ ಸದಸ್ಯರು, ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.