ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ‘ಸ್ವಚ್ಛ ಮೇವ ಜಯತೇ’

ಪುಂಜಾಲಕಟ್ಟೆ: ಇಲ್ಲಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸ್ವಚ್ಛ ಮೇವ ಜಯತೇ ಕಾರ್ಯಕ್ರಮದ ಅಂಗವಾಗಿ ಪರಿಸರ ದಿನಾಚರಣೆ ಮತ್ತು ಇ ತ್ಯಾಜ್ಯ ನಿರ್ವಹಣೆ ಬಗ್ಗೆ ಮಾಹಿತಿ ಶಿಬಿರ ಜರುಗಿತು.
ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷ ಗೋಪಾಲಕೃಷ್ಣ ಕೆ, ಗ್ರಾ.ಪಂ.ಸದಸ್ಯರಾದ ದಯಾನಂದ ಬಿ.ಕೆ. ಶಾಲಾ ಶಿಕ್ಷಕರಾದ ಕುಮುದಾ ಎಂ., ಪದ್ಮಜಾ ಬಿ.ಎಂ., ನಿರಂಜನ್ ಜೈನ್, ಸತ್ಯಕಿರಣ್ ಕುಮಾರ್, ಇತರ ಶಿಕ್ಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಡಂತ್ಯಾರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ. ರವರು ಇ-ತ್ಯಾಜ್ಯ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ನಂತರ ಶಾಲಾವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ನಡೆಸಲಾಯಿತು.
ಶಿಕ್ಷಕರಾದ ಧರಣೆಂದ್ರ ಜೈನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.