ಬೆಳ್ತಂಗಡಿ: ವಿಧಾನ ಪರಿಷತ್ ಶಾಸಕ, ಕಂದಾಯ ಇಲಾಖೆ ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ ರವರು ಇಂದು(ಜೂ.15) ಬೆಳ್ತಂಗಡಿ ತಾಲೂಕು ಮಿನಿ ವಿಧಾನ ಸೌಧಕ್ಕೆ ಭೇಟಿ ನೀಡಿ ಕಂದಾಯ ಇಲಾಖೆಯ ಎಲ್ಲಾ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಾರ್ವಜನಿಕರಿಂದ ಕುಂದು ಕೊರತೆಗಳ ಅಹವಾಲು ಸ್ವೀಕಾರ, ಪಿಂಚಣಿ ಯೋಜನೆಯ ಪ್ರಗತಿ ಪರಿಶಿಲನೆ, ಪಿಂಚಣಿದಾರರ ಕುಂದು ಕೊರತೆಗಳ ಬಗ್ಗೆ ಮಾಹಿತಿ, ಕಂದಾಯ ಅದಾಲತ್ ನಡೆಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್, ಮಾಜಿ ಶಾಸಕ ವಸಂತ ಬಂಗೇರ, ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ತಹಶೀಲ್ದಾರ್ ಗಣಪತಿ ಶಾಸ್ತ್ರಿ ಜಿ.ಪಂ . ಸದಸ್ಯ ಶಾಹುಲ್ ಹಮೀದ್, ಮತ್ತಿತರರು ಉಪಸ್ಥಿತರಿದ್ದರು.