HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಲೋಕಾಯುಕ್ತ ಇಲಾಖೆ ಅಧಿಕಾರಿಗಳಿಂದ ಪ್ರಗತಿ ಪರಿಶೀಲನೆ

ಬೆಳ್ತಂಗಡಿ: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಯವರು ಬೆಳ್ತಂಗಡಿಗೆ ಭೇಟಿ ನೀಡಿದ ಬೆನ್ನಲ್ಲೆ ಜೂ.17 ರಂದು ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ಬೆಳ್ತಂಗಡಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.
ಲೋಕಾಯುಕ್ತ ವಿಶ್ವನಾಥ ಶೆಟ್ಟಿಯವರು ಭೇಟಿ ನೀಡಿದ ಸಂದರ್ಭದಲ್ಲಿ ಬೆಳ್ತಂಗಡಿಯ ಮೆಸ್ಕಾಂ ಸಮೀಪವಿರುವ ವಿದ್ಯಾರ್ಥಿ ನಿಲಯದ ಕಿಟಕಿಗಳನ್ನು ಸರಿಪಡಿಸುವಂತೆ ಸೂಚಿಸಿದ್ದು, ಅದರಂತೆ ಭೇಟಿ ನೀಡಿದ ವೃತ್ತನಿರೀಕ್ಷಕಿ ಭಾರತಿ ಕಿಟಕಿಗಳನ್ನು ಸರಿಪಡಿಸುವ ಕಾರ್ಯವನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳ ಸಹಯೋಗದೊಂದಿಗೆ ವಿದ್ಯಾರ್ಥಿ ನಿಲಯದ ಸ್ವಚ್ಛತೆಯೆಡೆಗೆ ಗಮನ ಹರಿಸುವಂತೆ ನಿಯಮ ಪಾಲಕರಿಗೆ ಹೇಳಿದರು.
ಬಳಿಕ ತಾಲೂಕುಕಚೆರಿಗೆ ಭೇಟಿ ನೀಡಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಳೆಂಜ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲಾಗಿದ್ದು, ಪಿಲ್ಯದ ಖಾಸಗಿ ಜಮೀನು ಅತಿಕ್ರಮಣ ಹಾಗೂ ಕೊಲ್ಲಿ ಅಂಗನವಾಡಿ ಶಿಕ್ಷಕಿಯ ವರ್ಗಾವಣೆ ಕುರಿತು ಸಾರ್ವಜನಿಕರು ನೀಡಿದ ದೂರನ್ನು ಪರಿಶೀಲಿಸಲಾಗುತ್ತದೆ. ಚಾರ್ಮಾಡಿ ಗ್ರಾ.ಪಂ.ವ್ಯಾಪ್ತಿಯ ಹೋಟೆಲ್‌ನಲ್ಲಿ ತ್ಯಾಜ್ಯ ನೀರನ್ನು ರಸ್ತೆಗೆ ಬಿಡುತ್ತಿರುವ ಕುರಿತು ಬಂದ ದೂರನ್ನು ಪರಿಶೀಲಿಸಲು ಅಲ್ಲಿನ ಪಂಚಾಯತ್‌ಗೆ ಸೂಚಿಸಲಾಗಿದೆ ಎಂದರು.
ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿದ್ಯಾರ್ಥಿನಿಲಯವನ್ನು ಅಲ್ಲಿಂದ ಬದಲಿಸುವಂತೆ ಲೋಕಾಯುಕ್ತರು ಸೂಚಿಸಿದ್ದರು. ಅದರಂತೆ ಹಿಂದುಳಿದ ವರ್ಗಗಳ ಇಲಾಖೆಯ ಹಿರಿಯ ಅಧಿಕಾರಿಗಳು ಬದಲಿ ಕಟ್ಟಡದ ಹುಡುಕಾಟ ನಡೆಸಿದ್ದಾರೆ. ಇಲ್ಲಿಂದ ಬೇರೆ ಕಟ್ಟಡಕ್ಕೆ ವಿದ್ಯಾರ್ಥಿ ನಿಲಯವನ್ನು ಸ್ಥಳಾಂತರಿಸಲಾಗುತ್ತದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಭಾರತಿ ತಿಳಿಸಿದರು. ಈ ಸಂದರ್ಭದಲ್ಲಿ ಲೋಕಾಯುಕ್ತ ಸಿಬ್ಬಂದಿ ಸುರೇಂದ್ರ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.