ಸಂಜೀವಿನಿ ನಿರ್ವಹಣಾ ಪ್ರಗತಿ ಪರಿಶೀಲನೆ, ತರಬೇತಿ, ಇಲಾಖಾ ಮಾಹಿತಿ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ದ.ಕ.ಜಿ.ಪಂ ಮಂಗಳೂರು, ತಾಲೂಕು ಸಂಜೀವಿನಿ ನಿರ್ವಹಣಾ ಘಟಕ ಬೆಳ್ತಂಗಡಿ, ತಾ.ಪಂ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಪ್ರಗತಿ ಪರಿಶೀಲನೆ, ತರಬೇತಿ ಹಾಗೂ ವಿವಿಧ ಇಲಾಖೆಗಳ ಮಾಹಿತಿ ಕಾರ್ಯಕ್ರಮವು ಜೂ.20 ರಂದು ತಾ.ಪಂ. ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಸಂಜೀವಿನಿ ರಾಜ್ಯ ಕಾರ್ಯಕ್ರಮ ವ್ಯವಸ್ಥಾಪಕ ಎಂ.ಕೆ ಆಲಿ ಯವರು ಬೆಳ್ತಂಗಡಿ ತಾಲೂಕಿನ 38 ಗ್ರಾಮ ಪಂಚಾಯತ್‌ಗಳಲ್ಲಿ ರಚಿಸಲಾದ ಗ್ರಾ.ಪಂ.ಮಟ್ಟದ ಮಹಿಳಾ ಒಕ್ಕೂಟದ ಪದಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕೆ.ಇ ಜಯರಾಂ, ತೋಟಗಾರಿಕಾ ಇಲಾಖೆಯ ಸಹಾಯಕ ಅಧಿಕಾರಿ ಶಿವಪ್ರಕಾಶ್, ಶಿಶು ಅಭಿವೃಧ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್, ಕಾರ್ಯಕ್ರಮದ ಜಿಲ್ಲಾ ವ್ಯವಸ್ಥಾಪಕ ಹರಿಪ್ರಸಾದ್, ಜಿ.ಪಂ ಮಂಗಳೂರಿನ ಎಪಿಒ ಕು| ದಯಾವತಿ, ಹಾಗೂ ವಿವಿಧ ಇಲಾಖಾಧಿಕಾರಿಗಳು, ಸಂಜೀವಿನಿ ಮಹಿಳಾ ಒಕ್ಕೂಟದ ಪದಾಧಿಕಾರಿಗಳು ಮಾಹಿತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ತಾಲೂಕು ಸಂಯೋಜಕ ಜಯಾನಂದ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.