ವೇಣೂರು ಐಟಿಐಯಲ್ಲಿ ಯೋಗ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1

ವಿದ್ಯಾರ್ಥಿಗಳಿಗೆ ಹೊಸತನದ ಆಸಕ್ತಿ ಇರಲಿ: ಡಾ| ಹೆಗ್ಗಡೆ

ವೇಣೂರು: ತಂತ್ರಜ್ಞಾನ ಇಂದು ಸಾಕಷ್ಟು ಮುಂದುವರಿಯುತ್ತಿದೆ. ಐಟಿಐ ವಿದ್ಯಾರ್ಥಿಗಳಿಗೆ ಹೊಸತನ್ನು ಕಲಿಯುವ ಆಸಕ್ತಿ ಇದ್ದಾಗ ತಂತ್ರಜ್ಞಾನದಲ್ಲಿ ಸಾಧನೆ ಮಾಡಬಹುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜೂ .21 ರಂದು ಜರಗಿದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ತರಬೇತಿ ವಿಭಾಗಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿನ ಶಿಸ್ತು, ಕೆಲಸ ಕಾರ್ಯಗಳ ಬಗ್ಗೆ ಸಂತಸ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ತರಬೇತಿ ಅಧಿಕಾರಿಗಳಿಗೆ ಹೊಸ ಹೊಸ ತಂತ್ರ ಜ್ಞಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಮಾರ್ಗದರ್ಶನ ನೀಡಿದರು.
ಉಜಿರೆಯ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಡಾ| ಸೋನಿ ಸಿಕ್ವೇರಾ ಮತ್ತು ರಶ್ಮಿ ಯೋಗ ತರಬೇತಿ ನಡೆಸಿಕೊಟ್ಟರು. ಸಂಸ್ಥೆಯ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್ ಕೆ.ಆರ್., ನೇಮಕಾತಿ ಅಧಿಕಾರಿಗಳಾದ ಎಂ.ಆರ್. ಜೈನ್ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.