ಕುಸಿಯುವ ಭೀತಿಯಲ್ಲಿ ಕಕ್ಕಿಂಜೆ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಕ್ಕಿಂಜೆ: ಚಾರ್ಮಾಡಿ ಗ್ರಾ.ಪಂ ವ್ಯಾಪ್ತಿಯ ಕಕ್ಕಿಂಜೆ ಗ್ರಾಮದ ಕತ್ತರಿಗುಡ್ಡೆ ಎಂಬಲ್ಲಿ ಹಲವು ವರ್ಷಗಳ ಹಿಂದೆ ಸಾರ್ವಜನಿಕರಿಗಾಗಿ ಸರಕಾರದ ವತಿಯಿಂದ ನಿರ್ಮಿಸಿರುವಂತಹ ಸಾರ್ವಜನಿಕ ಕುಡಿಯುವ ನೀರು ಸರಬರಾಜು ಟ್ಯಾಂಕ್ ಬಿರುಕುಬಿಟ್ಟಿದ್ದು, ಕುಸಿಯುವ ಭೀತಿಯಲ್ಲಿದೆ
ಈ ಟ್ಯಾಂಕ್ ಸಮೀಪ ವಿದ್ಯುತ್ ಪರಿವರ್ತಕ, ಅಂಗನವಾಡಿ ಕೇಂದ್ರ ಹಾಗೂ ಹಲವಾರು ಮನೆಗಳಿದ್ದು, ಸ್ಥಳೀಯ ನಿವಾಸಿಗಳು ಭಯದಿಂದ ಬದುಕುವಂತಾಗಿದೆ. ಇದರಿಂದಾಗಿ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಕ್ಕೆ ಮಕ್ಕಳನ್ನು ಕಳುಹಿಸಲು ಪೋಷಕರು ಹಿಂಜರಿಯುತ್ತಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯತಿಗೆ ಈ ಬಗ್ಗೆ ಹಲವಾರು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗದೆ, ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಸಮಸ್ಯೆಯತ್ತ ಗಮನಹರಿಸಿ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಅನಾಹುತದ ಬಗ್ಗೆ ಕ್ರಮಕೈಗೊಳ್ಳಬೇಕಾಗಿ ನೊಂದ ನಾಗರಿಕರ ಪರವಾಗಿ ಸಾಮಾಜಿಕ ಹೋರಾಟಗಾರ ಸರ್ದಾರ್ ಎಸ್.ಎಮ್ ಚಾರ್ಮಾಡಿ ಮನವಿ ನೀಡಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.