ನಡುರಾತ್ರಿಯಲ್ಲಿ ಗೋರಕ್ಷಕರಿಗೆ ಕಾವಲಾಗಿ ನಿಂತ ಶಾಸಕ ಹರೀಶ್ ಪೂಂಜ

Advt_NewsUnder_1
Advt_NewsUnder_1
Advt_NewsUnder_1

ಬಂದಾರು: ಬಂದಾರು ಸಮೀಪ ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಪಡೆದ ಹಿಂದೂಸಂಘಟನೆಯ ಕಾರ್ಯಕರ್ತರು ಗೋಕಳ್ಳರ ವಾಹನವನ್ನು ತಡೆದು ಉಪ್ಪಿನಂಗಡಿ ಪೋಲಿಸರಿಗೆ ಒಪ್ಪಿಸಿದ ಘಟನೆ ಜೂ.27 ರಂದು ತಡರಾತ್ರಿಯ ಸಮಯದಲ್ಲಿ ನಡೆದಿದೆ.

ಗೋಕಳ್ಳರ ಮೇಲೆ ಕ್ರಮಕೈಗೊಳ್ಳುವಲ್ಲಿ ವಿಳಂಬ ತೋರಿಸಿದ ಉಪ್ಪಿನಂಗಡಿ ಪೊಲೀಸರು, ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ಘಟನೆಯ ಮಾಹಿತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತಡರಾತ್ರಿಯಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಕಾರ್ಯಕರ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಅಲ್ಲದೆ ಶಾಸಕ ಪೂಂಜರವರ ಪತ್ನಿಗೆ ರಾತ್ರಿ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮನೀಡಿದ್ದು, ಈ ಸಂದರ್ಭದಲ್ಲಿಯೂ ಕಾರ್ಯಕರ್ತರ ಸಂಕಷ್ಟಕ್ಕೆ ಧಾವಿಸಿ ಬಂದ ಶಾಸಕರ ಈ ನಡೆ ಈಗ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ನ್ಯಾಯವಾದಿ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಕಣಿಯೂರು ಗ್ರಾ.ಪಂ ಅಧ್ಯಕ್ಷ ಸುನೀಲ್ ಸಾಲಿಯಾನ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.