ಕಲ್ಮಂಜ ಗ್ರಾಮಸಭೆ

ಪಜಿರಡ್ಕ-ನಿಡಿಗಲ್ ರಸ್ತೆ ಡಾಮರಿಕರಣಕ್ಕೆ ಒತ್ತಾಯ

ಕಲ್ಮಂಜ: ಕಲ್ಮಂಜ ಗ್ರಾಮ ಪಂಚಾಯತದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮೀ ರವರ ಅಧ್ಯಕ್ಷತೆಯಲ್ಲಿ ಇಂದು(ಜು.4) ಕಲ್ಮಂಜ ಗ್ರಾ.ಪಂ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಶುವೈದ್ಯಾಧಿಕಾರಿ ಡಾ| ಕಾರ್ತಿಕ್ ಗ್ರಾಮಸಭೆಯ ನೇತೃತ್ವ ವಹಿಸಿದ್ದರು. ಜಿ.ಪಂ.ಸದಸ್ಯೆ ನಮಿತಾ ಕೆ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯೆ ಲೀಲಾವತಿ, ಗ್ರಾ.ಪಂ.ಉಪಾಧ್ಯಕ್ಷ ದಿನೇಶ್ ಗೌಡ, ಗ್ರಾ.ಪಂ ಸದಸ್ಯರು, ತಾಲೂಕು ಸಂಯೋಜಕ ಜಯಾನಂದ್, ವಿವಿಧ ಇಲಾಖಾ ಅಧಿಕಾರಿಗಳು, ಇಂದೇ ಅಧಿಕಾರ ವಹಿಸಿಕೊಂಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ, ಕಾರ್ಯದರ್ಶಿ ತಾರಾನಾಥ ನಾಯ್ಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗ್ರಾಮದ ರಸ್ತೆ, ಚರಂಡಿ ರಿಪೇರಿ, ರಸ್ತೆ ರಿಪೇರಿ ಮಾಡದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ಬೆದರಿಕೆಯನ್ನು ಗ್ರಾಮಸ್ಥರು ಒಡ್ಡಿದರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸಿ ಗ್ರಾಮದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿ, ಉತ್ತಮ ಹಾಗೂ ಮಾದರಿ ಗ್ರಾಮ ಎಂದು ಮಾರ್ಗದರ್ಶಿ ಅಧಿಕಾರಿಯವರಿಂದ ಮೆಚ್ಚುಗೆ ವ್ಯಕ್ತವಾಯಿತು. ಗ್ರಾ.ಪಂ ಸಿಬ್ಬಂದಿವರ್ಗ, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.