ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಸಭಾಭವನದಲ್ಲಿ ಪತ್ರಿಕಾ ದಿನಾಚರಣೆಯನ್ನು ಇಂದು (ಜು.6) ಆಚರಿಸಲಾಯಿತು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪೆರಡಾಲು ನಿವೃತ್ತ ಪತ್ರಕರ್ತ ರವಿರಾಜ ಅಜ್ರಿ ಸುಲ್ಕೇರಿ ಇವರನ್ನು ವೇದಿಕೆಯಲ್ಲಿ ಗಣ್ಯರ ಸಮ್ಮುಖ ಸನ್ಮಾನಿಸಿ ಗೌರವಿಸಲಾಯಿತು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಎನ್.ಪೂವಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್, ಜಿಲ್ಲಾಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ  ನಾಯಕ್ಇಂದಾಜೆ, ಪೆರಡಾಲು ನಿವೃತ್ತ ಪತ್ರಕರ್ತ ರವಿರಾಜ ಅಜ್ರಿ ಸುಲ್ಕೇರಿ, ಮೂಡಬಿದ್ರೆ ಆಳ್ವಾಸ್ ಕಾಲೇಜು ಉಪನ್ಯಾಸಕ ಡಾ| ಯೋಗೀಶ್ ಕೈರೋಡಿ, ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.