ಕಿನ್ನಿಗೋಳಿ-ಪಡಂಗಡಿ ಸಂಪರ್ಕ ರಸ್ತೆ ದುರವಸ್ಥೆ

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮದ್ದಡ್ಕ ಸಮೀಪದ ಕಿನ್ನಿಗೋಳಿ-ಪಡಂಗಡಿ ಗ್ರಾಮವನ್ನು ಸಂಪರ್ಕಿಸುವ ಸುಮಾರು 3.ಕಿಲೋ ಮೀಟರ್ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದೆ.
ಮಳೆಗಾಲದಲ್ಲಿ ರಸ್ತೆಯಲ್ಲಿರುವ ಹೊಂಡಗಳಲ್ಲಿ ನೀರು ತುಂಬಿ ಶಾಲಾ ಮಕ್ಕಳು, ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು, ವಾಹನ ಚಾಲಕರು ತೀವ್ರವಾದ ಸಂಕಷ್ಟ ಅನುಭವಿಸುವ ಸನ್ನಿವೇಶ ನಿರ್ಮಾಣವಾಗಿದೆ. ಕೆಲವು ಕಡೆ ನೀರು ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯ ಮಧ್ಯೆ ಹರಿಯುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತಕಡೆ ಗಮನಹರಿಸಿ ಈ ರಸ್ತೆಯನ್ನು ದುರಸ್ಥಿಗೊಳಿಸಿ ಸಂಚಾರಿಯೋಗ್ಯ ರಸ್ತೆಯನ್ನಾಗಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.