ಜಲಮರುಪೂರಣ ಅಭಿಯಾನ ಉದ್ಘಾಟನೆ ಹಾಗೂ ಮಾಹಿತಿ ಕಾರ್ಯಗಾರ

ಕಾರ್ಯಕ್ರಮ ಕ್ಕೂ ಮುನ್ನಅರಣ್ಯ ಇಲಾಖೆ ವತಿಯಿಂದ ಗಣ್ಯ ಅತಿಥಿಗಳು ಗಿಡ ನೆಡುವ ಮೂಲಕ ಜಲ ಸಂರಕ್ಷಣಾ ಅಭಿಯಾನಕ್ಕೆ ಚಾಲನೆ ನೀಡಿದರು. ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಸಾಮಾಜಿಕ ಚಿಂತಕ ಜಗ್ಗೇಶ್, ಶಾಸಕ ಹರೀಶ್ ಪೂಂಜ, ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಪಿ.ಡಿ ಆಂಟೊನಿ, ಪಿಡಬ್ಲ್ಯೂಡಿ ಕಾರ್ಯಪಾಲಕ ಅಭಿಯಂತರ ಶಿವಪ್ರಸಾದ್ ಅಜಿಲ, ತಹಶಿಲ್ದಾರ್ ಗಣಪತಿಶಾಸ್ತ್ರಿ, ತಾಲೂಕು ವೈದ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಬೆಳ್ತಂಗಡಿ: ಬೆಳ್ತಂಗಡಿ ಸಮಗ್ರ ಜಲಮೂಲಗಳ ನಿರ್ವಹಣಾ ಸಮಿತಿ ವತಿಯಿಂದ ಜಲಮರುಪೂರಣ ಅಭಿಯಾನದ ಅಂಗವಾಗಿ ತಾಲೂಕಿನಾದ್ಯಂತ ಜೀವಜಲದ ಮೂಲ ಉಳಿಸುವ ವಿನೂತನ ಕಾರ್ಯಕ್ರಮ ಉದ್ಘಾಟನೆ ಹಾಗೂ ಮಾಹಿತಿ ಕಾರ್ಯಗಾರವು ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಇಂದು (ಜು.9) ರಂದು ಜರುಗಿತು.

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಸಾಮಾಜಿಕ ಚಿಂತಕ ಜಗ್ಗೇಶ್ ಅಭಿಯಾನಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ನೆರವೇರಿಸಿದರು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿರುವ ಗಣ್ಯರಿಂದ ಜೀವಜಲದ ಮೂಲ ಉಳಿಸುವ ಜಾಗೃತಿಪತ್ರ ಬಿಡುಗಡೆ

ಸಂಪನ್ಮೂಲ ವ್ಯಕ್ತಿಯಾಗಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಉಪನ್ಯಾಸಕ ಡಾ| ಜೋಸೆಫ್ ಎನ್.ಎಂ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ದ.ಕಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್ ಸೆಲ್ವಮಣಿ, ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ರಾಜೇಂದ್ರ ಕಲ್ಬಾವಿ, ತಹಶಿಲ್ದಾರ್ ಗಣಪತಿ ಶಾಸ್ತ್ರಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕೆ.ಇ .ಜಯರಾಮ್, ಮತ್ತಿತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.