ಚಾರ್ಮಾಡಿಯಲ್ಲಿ ಧರ್ಮಸ್ಥಳ ಸಂಚಾರಿ ಆಸ್ಪತ್ರೆ ಶಿಬಿರದ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಚಾರ್ಮಾಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಚಾರಿ ಆಸ್ಪತ್ರೆಯ ಉಚಿತ ಆರೋಗ್ಯ ಶಿಬಿರ ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಠಾರದಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡಿತು.
ಚಾರ್ಮಾಡಿ ತಾಲೂಕು ಪಂಚಾಯತ್ ಸದಸ್ಯ ಕೊರಗಪ್ಪ ಗೌಡ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಾರ್ಮಾಡಿ ವಲಯ ಅಧ್ಯಕ್ಷೆ ಕೇಶವತಿ ಅಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ವೇದಿಕೆಯ ಚಾರ್ಮಾಡಿ ವಲಯ ಮಾಜಿ ಅಧ್ಯಕ್ಷ ಅನಂತರಾವ್, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ರಾಮಣ್ಣ ಭಂಡಾರಿ, ಸಂಚಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ನಾರಾಯಣ ಪ್ರಭು, ವಾಸು ಪೂಜಾರಿ ಮರ್‍ವದಡಿ, ಹರೀಶ್ ಗೌಡ ಅರಣೆಪಾದೆ, ಚಾರ್ಮಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿವರ್ಗ ಮತ್ತು ಊರಿನ ಗಣ್ಯರು ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕ ರವಿ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಚೇತನಾ, ಉಷಾ ಹಾಜರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.