ಮುಂಡಾಜೆ ಅಕ್ರಮ ಗೋಸಾಗಾಟ ಪ್ರಕರಣ: ಇನ್ನೋರ್ವ ಆರೋಪಿಯ ಬಂಧನ

ಮುಂಡಾಜೆ: ಇಲ್ಲಿಯ ಸನ್ಯಾಸಿಕಟ್ಟೆ ಬಳಿ ಐಷಾರಾಮಿ ಕಾರೊಂದರಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ತಲೆಮರೆಸಿಕೊಂಡಿದ್ದ ಇನ್ನೋರ್ವ ಪ್ರಮುಖ ಆರೋಪಿ ತೆಂಕಮಿಜಾರು ಗ್ರಾಮದ ತೋಡಾರು ನಿವಾಸಿ ಬಶೀರ್ ಯಾನೆ ಅರಗ ಬಶೀರ್(42.ವ) ಎಂಬವರನ್ನು ಮೂಡಬಿದ್ರೆ ಪೊಲೀಸರ ಸಹಕಾರದೊಂದಿಗೆ ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಈಗಾಗಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಜಾಮೀನು ನೀಡಿದೆ. ಬಶೀರ್ ವಿರುದ್ಧ ಅಕ್ರಮ ದನಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಸ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದ್ದು, ಕಳಸ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಅನ್ಸಾರ್  ಹಾಗೂ ಜುಬೇರ್ ಈಗಾಗಲೇ ಬಂಧಿಸಲಾದ ಆರೋಪಿಗಳು

ಪ್ರಕರಣಕ್ಕೆ ಸಂಬಂಧಿಸಿ ಮೂಡುಬಿದ್ರೆ ತೋಡಾರು ಹಿದಾಯತ್ ನಗರ ನಿವಾಸಿ ಕಾರು ಮಾಲಕ ಅನ್ಸಾರ್(27) ಹಾಗೂ ಜುಬೇರ್(26) ಎಂಬುವರನ್ನು ಈ ಹಿಂದೆಯೇ ಬಂಧಿಸಲಾಗಿತ್ತು. ಪ್ರಕರಣದ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.