ಬೆಳ್ತಂಗಡಿ : ಇಲ್ಲಿಯ ಸಂತೆಕಟ್ಟೆ ಬಳಿ ದ್ವಿಚಕ್ರ ವಾಹನ ಹಾಗೂ ಕಾರು ಪರಸ್ಪರ ಡಿಕ್ಕಿಹೊಡೆದ ಪರಿಣಾಮ ರಸ್ತೆಗೆ ಬಿದ್ದ ಬೈಕ್ ಸವಾರನ ಕಾಲಿನ ಮೇಲೆ ಪಿಕಪ್ ವಾಹನ ಹರಿದು ಗಂಭೀರ ಗಾಯಗೊಂಡ ಘಟನೆ ಜು.22 ರಂದು ರಾತ್ರಿ ವರದಿಯಾಗಿದೆ.
ಘಟನೆಯಿಂದ ಗಂಭೀರ ಗಾಯಗೊಂಡ ಬೈಕ್ ಸವಾರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೈಕ್ಸವಾರನ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.