ಹೊಸಂಗಡಿ: ಹೊಸಂಗಡಿ ಗ್ರಾ.ಪಂ.ನ 2019-20ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಜು. 23ರಂಸು ಹೊಸಂಗಡಿ ಗ್ರಾ.ಪಂ.ನ ಸಭಾಂಗಣದಲ್ಲಿ ಜರಗಿತು. ಗ್ರಾ.ಪಂ. ಅಧ್ಯಕ್ಷೆ ಹೇಮಾವಸಂತ್ ಅಧ್ಯಕ್ಷತೆ ವಹಿಸಿದ್ದರು.
ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಪಂಚಾಯತ್ರಾಜ್ ಎಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಚೆನ್ನಪ್ಪ ಮೊಲಿ ಅವರು ಸಭೆಯನ್ನು ನಡೆಸಿಕೊಟ್ಟರು. ಹೊಸಂಗಡಿ ಗ್ರಾ.ಪಂ. ಉಪಾಧ್ಯಕ್ಷೆ ಲಲಿತಾ ಟಿ. ಹೆಗ್ಡೆ, ಗ್ರಾ.ಪಂ. ಸದಸ್ಯರು, ವಿವಿಧ ಇಲಾಖಾಧಿಕಾರಿಗಳು, ಅಂಗನವಾಡಿ, ಆಶಾ ಮತ್ತು ಆರೋಗ್ಯ ಕಾಯಕರ್ತೆಯರು ಉಪಸ್ಥಿತರಿದ್ದರು.
ಪಂ. ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿ, ಸಭೆಯನ್ನು ನಿರ್ವಹಿಸಿದರು. ಪಂ. ಸಿಬ್ಬಂದಿ ಸತೀಶ್ ಪಿ.ವಿ. ಜಮಾಖರ್ಚು ಹಾಗೂ ವಾರ್ಡ್ಸಭೆಗಳಲ್ಲಿ ಬಂದ ಬೇಡಿಕೆಗಳನ್ನು ಮಂಡಿಸಿದರು. ಪಂ. ಕಾರ್ಯದರ್ಶಿ ಅನುಪಾಲನ ವರದಿ ವಾಚಿಸಿದರು.