ಅಪ್ರಾಪ್ತೆಯ ಅಪಹರಣಗೈದು ಲೈಂಗಿಕ ದೌರ್ಜನ್ಯ: ಐವರು ಆರೋಪಿಗಳ ಬಂಧನ

ಚಂದ್ರಾಕ್ಷ , ಸಂದೀಪ್ ಕುಮಾರ್, ಹರ್ಷೇಂದ್ರ ,ಲವ ಕುಮಾರ್ , ಲಕ್ಷ್ಮೀಶ ಯಾನೆ ಚರಣ್

ಉರುವಾಲು: ಅಪ್ರಾಪ್ತ ಬಾಲಕಿಯನ್ನು ಅಪಹರಣಗೈದು, ಲೈಂಗಿಕ ದೌರ್ಜನ್ಯವೆಸಗಿದ ಹಿನ್ನೆಲೆಯಲ್ಲಿ ಐವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಇಳಂತಿಲ ಗ್ರಾಮದ ಅಣಬೆಕೋಡಿ ಮನೆಯ ಚಂದ್ರಾಕ್ಷ (25), ಉರುವಾಲು ಗ್ರಾಮದ ಜನತಾ ಕಾಲನಿ ನಿವಾಸಿ ಸಂದೀಪ್ ಕುಮಾರ್ (23), ಕಣಿಯೂರು ಗ್ರಾಮದ ಬರಂಬು ಮನೆ ನಿವಾಸಿ ಹರ್ಷೇಂದ್ರ (24), ಕಣಿಯೂರು ಗ್ರಾಮದ ನಾಲೋಡಿ ಮನೆ ನಿವಾಸಿ ಲವ ಕುಮಾರ್ (27) ಹಾಗೂ ಶಿಶಿಲ ಗ್ರಾಮದ ಪೊಲಿಪುಮನೆ ನಿವಾಸಿ ಲಕ್ಷ್ಮೀಶ ಯಾನೆ ಚರಣ್ (24) ಬಂಧಿತ ಆರೋಪಿಗಳು.

ಘಟನೆಯ ವಿವರ: ಉರುವಾಲು ಗ್ರಾಮದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಜು.17ರಂದು ಬೆಳಿಗ್ಗೆ ಮನೆಯಿಂದ ನಾಪತ್ತೆಯಾಗಿದ್ದು, ಈಕೆಯ ಮನೆಯವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪಹರಣ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಬೆಂಗಳೂರಿಗೆ ಪರಾರಿಯಾಗುವ ಯತ್ನದಲ್ಲಿದ್ದ ಬಾಲಕಿಯನ್ನು ಹಾಸನದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈಕೆ ಚಂದ್ರಾಕ್ಷ ಎಂಬಾತನೊಂದಿಗೆ ತೆರಳಿದ್ದು, ಈಕೆಯೊಂದಿಗೆ ಲೈಂಗಿಕ ದೌರ್ಜನ್ಯವೆಸಗಿದ ಈತ ಬೆಂಗಳೂರಿನಲ್ಲಿರುವ ತನ್ನ ಚಿಕ್ಕಮ್ಮನ ಮನೆಯಲ್ಲಿರಿಸಲು ಸಿದ್ಧತೆ ನಡೆಸಿ, ಅದರಂತೆ ಬೆಂಗಳೂರಿಗೆ ಕಳುಹಿಸಿದ್ದ ಎನ್ನಲಾಗಿದೆ.

ಈಕೆಯ ಮೊಬೈಲ್‌ಫೋನ್ ಕರೆಗಳನ್ನು ಪರಿಶೀಲಿಸಿದಾಗ ಹಲವರಲ್ಲಿ ಈಕೆಗೆ ಮೊಬೈಲ್ ಸಂಪರ್ಕ ಇರುವುದು ತಿಳಿದು ಬಂದಿದ್ದು, ಆರುಮಂದಿ ಆರೋಪಿಗಳು ಬೇರೆಬೇರೆ ದಿನಗಳಲ್ಲಿ ಬೇರೆಬೇರೆ ಕಡೆ ಲೈಂಗಿಕ ದೌರ್ಜನ್ಯವೆಸಗಿರುವುದು ಬೆಳಕಿಗೆ ಬಂದಿದೆ. ಬಳಿಕ ಈಕೆ ನೀಡಿದ ಸುಳಿವನ್ನಾಧರಿಸಿ ಇವರಲ್ಲಿ ಐದು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೋರ್ವ ಆರೋಪಿ ಮಿಥುನ್ ತಲೆಮರೆಸಿಕೊಂಡಿದ್ದು, ಈತನ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.