ತಾಲೂಕು ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಸಮಾಲೋಚನಾ ಸಭೆ

ಬೆಳ್ತಂಗಡಿ: ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಬೆಳ್ತಂಗಡಿ ತಾಲೂಕಿನ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಸಮಾಲೋಚನಾ ಸಭೆಯು ಇಂದು (ಜು.26) ರಂದು ಬೆಳ್ತಂಗಡಿ ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಪಿನಾಕಿ ಸಭಾಭವನದಲ್ಲಿ ಜರುಗಿತು.


ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಪ್ರತಾಪ್‌ಚಂದ್ರ ಶೆಟ್ಟಿ, ನಿರ್ದೇಶಕರುಗಳಾದ ನಿರಂಜನ ಬಾವಂತಬೆಟ್ಟು, ಪದ್ಮನಾಭ ಶೆಟ್ಟಿ ಅರ್ಕಜೆ, ಜಯರಾಮ ರೈ, ಶ್ರೀಮತಿ ಸವಿತಾ, ವ್ಯವಸ್ಥಾಪಕ ನಿರ್ದೇಶಕರಾದ ನಾರಾಯಣ ಪ್ರಕಾಶ್, ನಿತ್ಯಾನಂದ ಭಟ್ ಹಾಗೂ ತಾಲೂಕಿನ ೮೧ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.