ಬೆಳ್ತಂಗಡಿಯಲ್ಲಿ ಕಾರ್ಯದಕ್ಷತೆ ತರಬೇತಿ ಶಿಬಿರ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ, ಬೆಂಗಳೂರು ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಮಂಗಳೂರು ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಮಂಗಳೂರು ಸಹಕಾರ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಆಡಳಿತ ನಿರ್ವಹಣೆ ಸಹಕಾರಿ ಸಂಘಗಳ ಚುನಾವಣೆ ಮತ್ತು ಲೆಕ್ಕ ಪತ್ರಗಳ ನಿರ್ವಹಣೆ ಕುರಿತು ಕಾರ್ಯದಕ್ಷತೆ ತರಬೇತಿ ಶಿಬಿರ ಇಂದು( ಜು.30) ಬೆಳ್ತಂಗಡಿಯ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆಯ ಸಭಾಂಗಣದಲ್ಲಿ ಜರುಗಿತು.
ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಬಿ ನಿರಂಜನ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ಅಧ್ಯಕ್ಷ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ ಸಲೀಂ, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ಉಪಾಧ್ಯಕ್ಷ ಸುಂದರ ಗೌಡ ಇಚ್ಚಿಲ, ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂzಕ ಎಸ್.ಜಿ ಮಂಜುನಾಥ ಸಿಂಗ್, ಹೆನ್ರಿ ಡಿಸೋಜಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕನ್ಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದ.ಕ.ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಸುಚಿತ್ರಾ, ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕರಿ ಪುರುಷೋತ್ತಮ ಎಸ್.ಪಿ, ಬೆಳ್ತಂಗಡಿ ತಾಲೂಕಿನ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.