ಆರಂಬೋಡಿ ಗ್ರಾಮಸಭೆ

ಆರಂಬೋಡಿ: ಆರಂಬೋಡಿ ಗ್ರಾಮ ಪಂಚಾಯತದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷ ಹೆಚ್. ಪ್ರಭಾಕರ ರವರ ಅಧ್ಯಕ್ಷತೆಯಲ್ಲಿ ಇಂದು(ಜು.30) ಹೊಕ್ಕಾಡಿಗೋಳಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಜರುಗಿತು.
ಮಾರ್ಗದರ್ಶಿ ಅಧಿಕಾರಿಯಾಗಿ ವೇಣೂರು ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿ ವೇಣುಗೋಪಾಲ್ ಗ್ರಾಮಸಭೆಯ ನೇತೃತ್ವ ವಹಿಸಿದ್ದರು. ಗ್ರಾ.ಪಂ. ಉಪಾಧ್ಯಕ್ಷೆ ಆಶಾ ಎಸ್ ಶೆಟ್ಟಿ, ಗ್ರಾ.ಪಂ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಕಾರ್ಯದರ್ಶಿ ಸೊಮಶೇಖರ್, ಗ್ರಾ.ಪಂ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲಿ 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.