HomePage_Banner_
HomePage_Banner_
HomePage_Banner_

ಒಂದೇ ದೇಶ ಒಂದೇ ಶಿಕ್ಷಣ ಜಾರಿಗಾಗಿ ಬೃಹತ್ ಧರಣಿ ಸತ್ಯಾಗ್ರಹ

Advt_NewsUnder_1

ಬೆಳ್ತಂಗಡಿ: ‘ಸರಕಾರಿ ಶಾಲೆ ಉಳಿಸಿ ಬೆಳೆಸಿ’ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ‘ಒಂದೇ ದೇಶ ಒಂದೇ ಶಿಕ್ಷಣ’ ಜಾರಿಗಾಗಿ ಹೊಸದಿಲ್ಲಿಯ ರಾಜಭವನದಲ್ಲಿ ಆ.1ರಂದು ಜಂತರ್‌ಮಂತರ್ ಕಾರ್ಯಕ್ರಮ ಹಾಗೂ ಭಾರತ ಶಿಕ್ಷಣ ರಥಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಡಂತ್ಯಾರು ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನ ಮಾಲಕ ಮೋಹನ ಚೌದರಿ ಭಾಗವಹಿಸಿದ್ದರು.
ದೇಶದಾದ್ಯಂತ ಮಾತೃಭಾಷೆಯೊಂದಿಗೆ ಇಂಗ್ಲಿಷ್ ಹಾಗೂ ಹಿಂದಿ ಶಿಕ್ಷಣವನ್ನು ಕಡ್ಡಾಯವಾಗಿ ನೀಡಬೇಕು, ಒಂದರಿಂದ ಹನ್ನೆರಡನೇ ತರಗತಿಯವರೆಗೆ ಉಚಿತ ಕಡ್ಡಾಯ ಶಿಕ್ಷಣ ನೀಡಬೇಕು. ಸಮಾನ ಶುಲ್ಕ ಹಾಗೂ ಶಿಕ್ಷಣ ಜಾರಿಗೊಳಿಸಬೇಕು, ಪ್ರತೀ ರಾಜ್ಯದಲ್ಲೂ ಶಿಕ್ಷಣಕ್ಕಾಗಿ ಶೇ.25 ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಬೇಕು ಎಂಬ ಬೇಡಿಕೆಯನ್ನು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ರಮೆಶ್ ಪೋಕ್ರಿಯಾಲ್ ರವರಿಗೆ ಈ ಸಂದರ್ಭದಲ್ಲಿ ಮನವಿ ಸಲ್ಲಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್, ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.