ಚಾರ್ಮಾಡಿಘಾಟಿ ಬಳಿ ಪ್ರಪಾತಕ್ಕೆ ಉರುಳಿದ ಲಾರಿ

ಚಾರ್ಮಾಡಿಘಾಟಿ: ಬಳ್ಳಾರಿಯಿಂದ ಧರ್ಮಸ್ಥಳ ಕಡೆಗೆ ಕುರಿಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿಯಿಂದ ಕೊಟ್ಟಿಗೆಹಾರಕ್ಕೆ ಹೋಗುವ ಘಾಟ್‌ರಸ್ತೆಯ ಮೂರನೇ ತಿರುವಿನಲ್ಲಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಆ.1 ರಂದು ರಾತ್ರಿ ನಡೆದಿದೆ.
ಘಟನೆಯಿಂದಾಗಿ ಲಾರಿ ಚಾಲಕ ಹ್ಯಾರಿಸ್ ಹಾಗೂ ನಿರ್ವಾಹಕ ಮಹಮ್ಮದ್ ಹ್ಯಾರೀಸ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಧರ್ಮಸ್ಥಳ ಪೊಲೀಸರು ಹಾಗೂ ಸಾರ್ವಜನಿಕರು ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ್ದರು. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.