ಕುವೆಟ್ಟು ಗ್ರಾಮಸಭೆ

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷ ಅಶೋಕ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಇಂದು(ಆ.3) ಪಂಚಾಯತ್ ಸಭಾಭವನದಲ್ಲಿ ಜರುಗಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸತೀಶ್ ಪಿ ಗ್ರಾಮಸಭೆಯ ನೇತೃತ್ವ ವಹಿಸಿದ್ದರು. ಜಿ.ಪಂ ಸದಸ್ಯೆ ಮಮತಾ ಎಂ ಶೆಟ್ಟಿ, ತಾ.ಪಂ ಸದಸ್ಯ ಗೋಪಿನಾಥ ನಾಯಕ್, ಗ್ರಾ.ಪಂ. ಉಪಾಧ್ಯಕ್ಷೆ ಅಕ್ಷತಾ ಕೆ ಶೆಟ್ಟಿ, ಗ್ರಾ.ಪಂ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಪಿ.ಡಿ, ಗ್ರಾ.ಪಂ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸಿದ್ದರು.


ಈ  ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸತತ 8ನೇ ಬಾರಿಗೆ ಶೇ.100ಫಲಿತಾಂಶ ದಾಖಲಿಸಿದ ಗುರುವಾಯನಕೆರೆ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರನ್ನು ವೇದಿಕೆಯಲ್ಲಿ ಗಣ್ಯರ ಸಮ್ಮುಖ ಸನ್ಮಾನಿಸಿ ಗೌರವಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.