ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ

Advt_NewsUnder_1
Advt_NewsUnder_1
Advt_NewsUnder_1

ಕಳಿಯ: ಇಲ್ಲಿಯ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರ ಸನ್ನಿಧಿಯಲ್ಲಿ ವಿಶೇಷಪೂಜೆ ನಡೆಯಿತು. ದೇವರಿಗೆ ಹಾಲು, ಸಿಯಾಳ ಅಭಿಷೇಕ ಹಾಗೂ ವಿವಿಧ ಬಗೆಯ ಹೂ,ಹಿಂಗಾರಗಳ ಅಲಂಕಾರದೊಂದಿಗೆ ನಾಗತಂಬಿಲ ಸೇವೆಯನ್ನು ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ಸಮರ್ಪಿಸಿದರು. ದೇವಸ್ಥಾನದ ಪ್ರದಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಪೂಜಾ ಕೈಂಕರ್ಯವನ್ನು ನೇರವರಿಸಿದರು.


ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಸಂತ ಮಜಲು, ಸಮಿತಿ ಸದಸ್ಯ ಜನಾರ್ದನ ಪೂಜಾರಿ ಗೇರುಕಟ್ಟೆ, ಅಭಿವೃದ್ಧಿಸಮಿತಿ ಅಧ್ಯಕ್ಷ ಯಾದವ ಗೌಡ ಮುದ್ದುಂಜ, ಪ್ರದಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ವ್ಯವಸ್ಥಾಪಕ ಗಿರೀಶ್ ಶೆಟ್ಟಿ ಗೇರುಕಟ್ಟೆ, ಸಹಾಯಕ ಅರ್ಚಕರಾದ ನಾಗರಾಜ್ ಭಟ್ಟ, ಜಯರಾಮ ಭಟ್ಟ, ಸಿಬ್ಬಂದಿಗಳು ಹಾಗೂ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.