ಬಿಜೆಪಿ ಮಂಡಲದಿಂದ ದಿ| ಸುಷ್ಮಾ ಸ್ವರಾಜ್‌ರಿಗೆ ಶ್ರದ್ಧಾಂಜಲಿ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಆ.6ರಂದು ನಿಧನರಾದ ಸುಷ್ಮಾ ಸ್ವರಾಜ್ ಅವರಿಗೆ ಶ್ರದ್ಧಾಂಜಲಿ ಸಭೆಯು ಬೆಳ್ತಂಗಡಿ ಬಿಜೆಪಿ ಕಛೇರಿ ವಠಾರದಲ್ಲಿ ನಡೆಯಿತು
ಸುಷ್ಮಾ ಸ್ವರಾಜ್ ಅವರ ಭಾವಚಿತ್ರಕ್ಜೆ ಪುಷ್ಪಾರ್ಚನೆ ಸಲ್ಲಿಸಿ, ನುಡಿನಮನ ಸಲ್ಲಿಸಿದ ಬಿಜೆಪಿ ವಿಭಾಗ ಸಹಪ್ರಭಾರಿ ಪ್ರತಾಪಸಿಂಹ ನಾಯಕ್, ಸುಷ್ಮಾ ಅವರ ಅಗಲುವಿಕೆ ಬಿಜೆಪಿ ಕುಟುಂಬ ಹಾಗೂ ದೇಶಕ್ಕೆ ತುಂಬಲಾರದ ನಷ್ಟ. ಅವರು ಲೋಕಸಭೆ ಹಾಗೂ ಸಾರ್ವಜನಿಕ ಸಭೆಯಲ್ಲಿ ಅಧಿಕಾರಯುತವಾಗಿ ಜನರನ್ನು ಒಪ್ಪಿಸುವಂತಹ ಮಾತುಗಳಿಂದ ಜನರ ಮನೆಮಾತಾಗಿದ್ದರು ಎಂದರು. ಜಿಲ್ಲಾ ಉಪಾಧ್ಯಕ್ಷೆ ಶಾರದಾ ಆರ್. ರೈ ಯವರು ಮೃತರಿಗೆ ನುಡಿನಮನ ಸಲ್ಲಿಸಿದರು.


ಮಾಜಿ ಶಾಸಕ ಪ್ರಭಾಕರ ಬಂಗೇರ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನಕಾರ್ಯದರ್ಶಿ ಸೀತಾರಾಮ ಬಿ.ಎಸ್., ಪ್ರಭಾಕರ ಶೆಟ್ಟಿ ಉಪ್ಪಡ್ಕ, ಜಿ.ಪಂ.ಸದಸ್ಯರಾದ ಕೊರಗಪ್ಪ ನಾಯ್ಕ, ಮಮತಾ ಎಂ. ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಧನಲಕ್ಷ್ಮೀ, ಕಾರ್ಯದರ್ಶಿ ವಸಂತಿ ಮಚ್ಚಿನ, ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.