ನೇತ್ರಾವತಿ ನದಿತೀರದ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಡಿ.ಸಿ ಸೂಚನೆ

ಬೆಳ್ತಂಗಡಿ: ನೇತ್ರಾವತಿ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ನದಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ನದಿ ಪಕ್ಕದಲ್ಲಿ ವಾಸಿಸುತ್ತಿರುವ ಎಲ್ಲಾ ನಾಗರೀಕರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ.

ಈಗಾಗಲೇ ನದಿ ತೀರದ ಪ್ರಮುಖ ಸಂಭಾವ್ಯ ಸ್ಥಳಗಳಲ್ಲಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಯಾವುದೇ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನಧ್ಧವಾಗಿದೆ. ಉಪ್ಪಿನಂಗಡಿಯಿಂದ ಮಂಗಳೂರುವರೆಗೆ ನೇತ್ರಾವತಿ ನದಿ ತೀರದ ಎರಡೂ ಬದಿಗಳ ಸಮೀಪದ ಪ್ರದೇಶಗಳಲ್ಲಿ ವಾಸಿಸುವ ನಾಗರೀಕರು ತಕ್ಷಣದಿಂದಲೇ ತಮ್ಮ ಕುಟುಂಬದೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.