ಬಳಂಜ ಬಿಲ್ಲವ ಸಂಘದಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಬಳಂಜ : ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂಬ ಸಂದೇಶವನ್ನು ಜಗತ್ತಿಗೆ ಸಾರಿ ಅಸ್ಪ್ರಶ್ಯತೆ ಎಂಬ ಪಿಡುಗನ್ನು ಹೊಗಲಾಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶ ಹಾಗೂ ಸತ್ಯ ಧರ್ಮಕ್ಕಾಗಿ ಇಡೀ ಜೀವನವನ್ನೇ ಮುಡಿಪಾಗಿಟ್ಟ ಅವಳಿ ವೀರರಾದ ಕೋಟಿ-ಚೆನ್ನಯರ ಆದರ್ಶವನ್ನು ನಾವೆಲ್ಲರೂ ರೂಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ಮುಖಂಡ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದರು.


ಅವರು ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇದರ ವತಿಯಿಂದ ನಡೆದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ರಮೇಶ್ ಸಾಲಿಯಾನ್ ಉದ್ಘಾಟಿಸಿ ಶುಭಹಾರೈಸಿದರು.
ಬಳಂಜ-ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ಕಳೆದ ಹಲವು ವರ್ಷಗಳಿಂದ ಆಟಿಕೂಟವನ್ನು ಸಂಘದ ಪದಾಧಿಕಾರಿಗಳ ಮನೆಯಲ್ಲಿ ಮಾಡುತ್ತಿದ್ದೆವು. ಆದ್ರೆ ಎಲ್ಲರ ಶ್ರಮದಿಂದ ಈ ವರ್ಷ ನೂತನ ಸಭಾಭವನದ ಕಛೇರಿಯಲ್ಲಿ ಮಾಡಲು ಸಂತೋಷವಾಗುತ್ತಿದೆ. ಸುಮಾರು 60 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸಭಾಭವನಕ್ಕೆ ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು.
ಮುಖ್ಯ ಅತಿಥಿ ನೆಲೆಯಲ್ಲಿ ಜಿ.ಪಂ ಸದಸ್ಯ ಧರಣೇಂದ್ರ ಕುಮಾರ್ ಮಾತನಾಡಿ ಬಳಂಜ-ಬಿಲ್ಲವ ಸಂಘವು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಾ ತಾಲೂಕಿನಲ್ಲಿ ಮಾದರಿ ಸಂಘವಾಗಿ ಬೆಳೆಯುತ್ತಿರುವುದು ಖುಷಿ ಕೊಟ್ಟಿದೆ ಎಂದರು.
ವೇದಿಕೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬೆಳ್ತಂಗಡಿ ಶ್ರೀ ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ಕಾಪಿನಡ್ಕ, ಬಳಂಜ ಬಿಲ್ಲವ ಸಂಘದ ಗೌರವಾಧ್ಯಕ್ಷ ಹೆಚ್. ಧರ್ಣಪ್ಪ ಪೂಜಾರಿ, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ ಯೈಕುರಿ, ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕಾಧ್ಯಕ್ಷ ಲಲಿತಾ ಟೀಚರ್, ತಾ.ಯುವ ಬಿಲ್ಲವ ಬಳಂಜ ವೇದಿಕೆ ಕಾರ್ಯದರ್ಶಿ ರಂಜಿತ್ ಹೆಚ್.ಡಿ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ, ತಾ.ಪಂ ಸದಸ್ಯೆ ವಿನೂಷಪ್ರಕಾಶ್, ಸಂಘದ ಕಾರ್ಯದರ್ಶಿ ಯೋಗೀಶ್ ಪೂಜಾರಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಜಗದೀಶ್ ಬಳ್ಳಿದಡ್ಕ, ಕಾರ್ಯದರ್ಶಿ ಪ್ರಶಾಂತ್ ಪೆರಾಜೆ ಉಪಸ್ಥಿತರಿದ್ದರು.
ಬೆಳ್ತಂಗಡಿ ಶ್ರೀ.ಗು.ನಾ.ಸೇ.ಸಂಘದ ನಿರ್ದೇಶಕ ಸಂತೋಷ್ ಪಿ.ಕೋಟ್ಯಾನ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿ, ಸದಸ್ಯ ಜಗದೀಶ್ ಪರಾರಿ ನಿರೂಪಿಸಿ, ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಅನುಶ್ರೀ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.