HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಇನ್ನಿಲ್ಲ

ಕೇಂದ್ರದ ಮಾಜಿ ಹಣಕಾಸು ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ (66ವ) ಅವರು  ಇಂದು (ಆ .24 )ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ  ಎಂದು ಏಮ್ಸ್ ಆಸ್ಪತ್ರೆಯ ಮಾಧ್ಯಮ ವಿಭಾಗದ ಮುಖ್ಯಸ್ಥೆ ಆರ್ಥಿ ವಿಜಿ ಮಾಧ್ಯಮಕ್ಕೆ ಅಧಿಕೃತ ಪ್ರಕಟಣೆ ಬಿಡುಗಡೆಗೊಳಿಸಿದ್ದಾರೆ.
ಇವರ ಶ್ವಾಸಕೋಶದಲ್ಲಿ ನೀರು ತುಂಬಿದ್ದು,  ಈ ಕಾರಣದಿಂದ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದ್ದು , ಚಿಕಿತ್ಸೆಗೆ  ಸ್ಪಂದಿಸದೆ  ಇಂದು ಅಸ್ತಂಗತರಾದರು

ನರೇಂದ್ರ ಮೋದಿ ಸರಕಾರದ ಮೊದಲ ಅವಧಿಯಲ್ಲಿ ವಿತ್ತ ಹಾಗೂ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಜೇಟ್ಲಿ 1991ರಿಂದಲೇ ಬಿಜೆಪಿಯ ರಾಷ್ಟ್ರೀಯ ನಾಯಕರಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದರು.

ಅನಾರೋಗ್ಯದ ಕಾರಣದಿಂದಾಗಿ ಜೇಟ್ಲಿ, ಎರಡನೆ ಅವಧಿಯ ಮೋದಿ  ಸಂಪುಟದಲ್ಲಿ ಸೇರ್ಪಡೆಗೊಳ್ಳಲು ನಿರಾಕರಿಸಿದ್ದರು. 2018ರಲ್ಲಿ ಅವರು ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಜೇಟ್ಲಿ ತನ್ನನ್ನು ಬಾಧಿಸಿದ್ದ ಮಧ್ವಸ್ತಿ (ಸಾಫ್ಟ್‌ಟಿಶ್ಯೂ)ಯ ಕ್ಯಾನ್ಸರ್ ಕಾಯಿಲೆಗಾಗಿ ಈ ವರ್ಷದ ಜನವರಿಯಲ್ಲಿ ಅಮೆರಿಕದಲ್ಲಿ ಚಿಕಿತ್ಸೆ ಪಡೆದಿದ್ದರು.

ದೀರ್ಘ ಸಮಯದಿಂದ ಮಧುಮೇಹದಿಂದ ಬಳಲುತ್ತಿದ್ದುದರಿಂದ ಜೇಟ್ಲಿ ಅವರನ್ನು ಬೊಜ್ಜಿನ ಸಮಸ್ಯೆ ಕೂಡಾ ಕಾಡಿತ್ತು. ಇದಕ್ಕಾಗಿ ಅವರು 2014ರಲ್ಲಿ ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆ (ಬೆರಿಯಾಟ್ರಿಕ್ ಸರ್ಜರಿ)ಗೆ ಒಳಗಾಗಿದ್ದರು. ಈ ಅವಧಿಯಲ್ಲಿ ಆಗ ರೈಲ್ವೆ ಸಚಿವರಾಗಿದ್ದ ಪಿಯೂಶ್ ಗೋಯಲ್, ವಿತ್ತ ಖಾತೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಿಕೊಂಡಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.